ಶಿವಮೊಗ್ಗ: ಕರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ರಾತ್ರಿ 9ರಿಂದ ಬೆಳಗ್ಗೆ 6ರವರೆಗೂ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಮಾಡಲು ಮುಂದಾಗಿದೆ.
ಪೆಟ್ರೊಲ್ ಬಂಕ್ ಕಾರ್ಯ ನಿರ್ವಹಿಸುವ ಅವಧಿಯ ಬಗ್ಗೆ ಶಿವಮೊಗ್ಗ ಜಿಲ್ಲಾ ಡೀಲರ್ಸ್ ಪೆಟ್ರೊಲಿಯಮ್ ಅಸೋಸಿಯೇಷನ್ ವತಿಯಿಂದ ಶೀಘ್ರದಲ್ಲೇ ರಾಜ್ಯ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
ಪ್ರತಿ ದಿನ ಬೆಳಗ್ಗೆ 6ರಿಂದ ರಾತ್ರಿ 8ರವರೆಗೂ ಪೆಟ್ರೊಲ್ ಬಂಕ್ ಕಾರ್ಯ ನಿರ್ವಹಿಸುವ ಬಗ್ಗೆ, ಶನಿವಾರ ಹಾಗೂ ಭಾನುವಾರ ಸಂಪೂರ್ಣ ಚಟುವಟಿಕೆ ಸ್ಥಗಿತಗೊಳಿಸಲು ಶಿವಮೊಗ್ಗ ಜಿಲ್ಲಾ ಅಸೋಸಿಯೇಷನ್ ತೀರ್ಮಾನಿಸಿದ್ದ ನಿರ್ಧಾರವನ್ನು ಹಿಂಪಡೆಯಲಾಗಿದೆ.
ರಾತ್ರಿ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಅವಧಿಯಲ್ಲಿ ಪೆಟ್ರೊಲ್ ಬಂಕ್ಗಳು ಕಾರ್ಯ ನಿರ್ವಹಿಸುವ ಬಗ್ಗೆ ಶೀಘ್ರದಲ್ಲೇ ರಾಜ್ಯ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಡೀಲರ್ಸ್ ಪೆಟ್ರೊಲ್ ಅಸೋಸಿಯೇಷನ್ ಕಾರ್ಯದರ್ಶಿ ಡಿ.ಎಸ್.ಅರುಣ್ ತಿಳಿಸಿದ್ದಾರೆ.