Site icon TUNGATARANGA

ಶಿವಮೊಗ್ಗದಲ್ಲಿ ಕೊರೊನಾ ಸೊಂಕು ಹೆಚ್ಚಳ: 15 ಸಾವು?!


ಶಿವಮೊಗ್ಗ,ಏ.04:
ಜಿಲ್ಲೆಯಲ್ಲಿ ಮಂಗಳವಾರವಾದ ಇಂದು ಬಂದ ವರದಿಯನುಸಾರ ಕೊರೊನಾ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ 612 ಮಂದಿಗೆ ಸೋಂಕು ತಗುಲಿದ್ದು, ಒಟ್ಟಾರೆ ಇಂದು 642 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 420 ಕ್ಕೆ ಏರಿದೆ. ಮಂಗಳವಾರ ಶಿವಮೊಗ್ಗ ತಾಲೂಕಿನಲ್ಲಿ 230 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 62, ಶಿಕಾರಿಪುರ 50, ತೀರ್ಥಹಳ್ಳಿಯಲ್ಲಿ 39 ,ಸೊರಬ 48, ಸಾಗರ 124, ಹೊಸನಗರ 16 ಹಾಗೂ ಇತರೆ ಜಿಲ್ಲೆಗಳ 43 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 23 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ 3486 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Exit mobile version