ಶಿವಮೊಗ್ಗ, ಮೇ.10:
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆ ಈ ಭಾರಿ ಮತ್ತೆ ಆತಂಕವನ್ನು ಸೃಷ್ಟಿ ಮಾಡಿದೆ. ಜಿಲ್ಲೆಯಲ್ಲಿ ಮಂಗಳವಾರ ಕೊರೊನಾ ಸೋಂಕು ಕಂಡುಬಂದಿರುವವರ ಸಂಖ್ಯೆ ಸಾವಿರದೈನೂರರ ಗಡಿದಾಟಿದೆ.
ನಿನ್ನೆ ಮೊದಲ ಭಾರಿಗೆ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿ ಆತಂಕ ಸೃಷ್ಟಿಸಿದ್ದು ಸತ್ಯ.
ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 1596 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ದಾಖಲಾಗಿದೆ. ದುರಂತವೆಂದರೆ ಇಂದಿನ ಚೆಕಪ್ ನಲ್ಲಿ ಅರ್ಧಕ್ಕಿಂತ ಜಾಸ್ತಿ ಜನರಿಗೆ ಪಾಸೀಟೀವ್ ಬಂದಿದೆ. ನೆಗಿಟೀವ್ ಬಂದವರ ಸಂಖ್ಯೆ 1546.
10 ಮಂದಿ ಕೋವಿಡ್ ಸೊಂಕಿಗೆ ಜಿಲ್ಲೆಯಲ್ಲಿ ಮೃತರಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 516ಕ್ಕೆ ಏರಿಕೆಯಾಗಿದೆ.
ಇನ್ನು 556 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 6044
ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಶಿವಮೊಗ್ಗ ತಾಲ್ಲೂಕಿನ 484 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 290, ಶಿಕಾರಿಪುರ 158, ತೀರ್ಥಹಳ್ಳಿಯಲ್ಲಿ 123 , ಸೊರಬ 144, ಸಾಗರ 260, ಹೊಸನಗರ 95 ಹಾಗೂ ಇತರೆ ಜಿಲ್ಲೆಗಳ 15 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ.
81 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 6044 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.