Site icon TUNGATARANGA

ಶಿವಮೊಗ್ಗದಲ್ಲಿ ಮಳೆ : ತುಂಬಿದ ತುಂಗೆ

ಶಿವಮೊಗ್ಗ : ಮಳೆಗಾಲದ ಮುಂಚೆಯೇ ಗಾಜನೂರು ಅಣೆಕಟ್ಟು ಭರ್ತಿಯಾಗಿದ್ದು, ಈಗಾಗಲೇ ಪವರ್ ಹೌಸ್ ಮೂಲಕ ೫೦೦ ಕ್ಯೂಸೆಕ್ಸ್ ನಷ್ಟು ನೀರು ಹೊರಗೆ ಬಿಡಲಾಗಿದೆ.


ಜಲಾಶಯ ಭರ್ತಿಯಾಗಲು ಕೇವಲ ೧೦ ಇಂಚು ಮಾತ್ರ ಬಾಕಿ ಇದೆ. ನದಿ ಪಾತ್ರದ ಮತ್ತು ನಾಲೆ ಪಾತ್ರಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಚ್ಚರಿಕೆಯಿಂದ ಇರಲು ಮತ್ತು ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ


ಒಂದೆರಡು ಗಂಟೆ ಸುರಿದ ಮಳೆಗೆ ನಗರದ ತಗ್ಗು ಪ್ರದೇಶ ಮತ್ತು ರಾಜಕಾಲುವೆ ಹರಿಯುವ ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗುತ್ತಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳಿಂದ ಚರಂಡಿಗಳಲ್ಲಿ ನೀರು ಸರಾಗವಾಗಿ ಸಾಗುತ್ತಿಲ್ಲ. ಇದರ ಬಗ್ಗೆ ಗಮನಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಳೆ ಹೀಗೆ ಮುಂದುವರೆದರೆ ಆಗುಂಬೆ ಭಾಗದಲ್ಲಿ ಬಸ್ ಸಂಚಾರ ಸ್ಥಗಿತಕ್ಕೂ ಯೋಚಿಸಲಾಗಿದೆ. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಸೂಚನೆ ನೀಡಲಾಗಿದೆ.
ಒಟ್ಟಾರೆ ಹವಾಮಾನ ಇಲಾಖೆಯ ಸೂಚನೆಯಂತೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಕೈಗೊಂಡಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

Exit mobile version