Site icon TUNGATARANGA

1,250 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಲಾಕ್‌ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಸುಮಾರು ೧,೨೫೦ ಕೋಟಿ ರೂಪಾಯಿಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಇಂದು ಸಚಿವ ಸಂಪುಟದ ಸಹೋ ದ್ಯೋಗಿಗಳ ಜೊತೆ ಸಭೆ ನಡೆಸಿ ಚರ್ಚೆ ಮಾಡಿ ತೆಗೆದು ಕೊಂಡ ತೀರ್ಮಾನಗಳು, ಪರಿಹಾರಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರಕಟಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ


ಲಾಕ್ ಡೌನ್ ಮೇ ೨೪ರವರೆಗೆ ಜಾರಿಯಲ್ಲಿದ್ದು, ರಾಜ್ಯದ ಜನತೆಯ ಆರೋಗ್ಯ ಹಿತದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡೆವು. ಈ ನಿರ್ಬಂಧದಿಂದ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳು ಕ್ಷೀಣಿಸಿ ಸಮಾಜದ ಹಲವು ವರ್ಗಗಳ ಜನರ ಬದುಕಿನ ಮೇಲೆ ತೀವ್ರ ಹೊಡೆತ ಬಿದ್ದಿರುವ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಸರ್ಕಾರ ಯಾವತ್ತಿಗೂ ಜನರ ಪರವಾಗಿರುತ್ತದೆ ಎಂದು ಆಶ್ವಾಸನೆ ನೀಡುತ್ತೇನೆ ಎಂದ
ರು.

ಯಾರ‍್ಯಾರಿಗೆ ಎಷ್ಟೆಷ್ಟು

Exit mobile version