ಶಿವಮೊಗ್ಗ : ಮೇ 21:
ಜಿಲ್ಲೆಯಲ್ಲಿ ಕೊರೋನ ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಹಾಗೆಂದು ಮೈಮರೆಯದೆ ಸದಾ ಎಚ್ಚರವಾಗಿದ್ದು, ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕೆಂದು ಸಂಸದ ಬಿ.ವೈ.ರಾಘವೇಂದ್ರ ಅವರು ಗ್ರಾಮೀಣ ಜನತೆಗೆ ಕಿವಿಮಾತು ಹೇಳಿದರು.
ಅವರು ಇಂದು ಶಿವಮೊಗ್ಗ ಸಮೀಪದ ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಶಾಸಕ ಕೆ.ಬಿ.ಅಶೋಕನಾಯ್ಕ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಕೊರೋನ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಪ್ರಸ್ತುತ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ, ಜಿಲ್ಲೆಯ ಚುನಾಯಿತ ಸಮಸ್ತ ಜನಪ್ರತಿನಿಧಿಗಳು ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳ ಸಹಕಾರದೊಂದಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕಲ್ಲದೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಅವರು ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ ಅವರು ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ದಿನೆದಿನೇ ಹೆಚ್ವಳವಾಗುತ್ತಿದೆ. ವ್ಯಕ್ತಿಯಲ್ಲಿ ಸೋಂಕಿನ ಗುಣಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯರು ಸಮೀಪದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ, ನಿಗದಿಪಡಿಸಿದ ಸ್ಥಳದಲ್ಲಿ ಕೆಲಕಾಲ ತಂಗಿದ್ದು, ಸರ್ಕಾರದಿಂದ ನೀಡಲಾಗುವ ಉಚಿತ ಚಿಕಿತ್ಸೆ ಪಡೆದು ಗುಣಮುಖರಾಗುವಂತೆ ಸಲಹೆ ನೀಡಿದ ಅವರು, ಈ ಕ್ರಮ ಅನುಸರಿಸುವುದರಿಂದ ಹಳ್ಳಿಗಳಲ್ಲಿ ಸೋಂಕು ಮುಕ್ತಗೊಳಿಸಬಹುದಾಗಿದೆ ಎಂದರು.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.
ಈಗಾಗಲೇ ಜಿಲ್ಲೆಯ ಕುಂಸಿ, ನವುಲೆ, ಗಾಜನೂರು ಮುಂತಾದ ಪ್ರದೇಶಗಳಲ್ಲಿ ಕೋವಿಡ್ ಆರೈಕೆ ಕೆಂದ್ರಗಳನ್ನು ತೆರೆಯಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ತಹಶಿಲ್ದಾರ ನಾಗರಾಜ್, ತಾ. ವೈದ್ಯಾಧಿಕಾರಿ ಚಂದ್ರಶೇಖರ್, ಕಲ್ಲಪ್ಪ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಆರೋಗ್ಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.