Site icon TUNGATARANGA

ರಸಗೊಬ್ಬರ, ಬಿತ್ತನೆ ಬೀಜದ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸಚಿವ ಬಿ.ಸಿ. ಪಾಟೀಲ್

ಕೃಷಿ ಇಲಾಖೆಯ ಕಾರ್ಯ ನಿಮಿತ್ತವಾಗಿ ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ಶಿಕಾರಿಪುರದ ನಿವಾಸಕ್ಕೆ ಆಗಮಿಸಿದ ಕೃಷಿ ಸಚಿವರಾದ ಶ್ರೀ ಬಿ ಸಿ ಪಾಟೀಲ್ ರವರನ್ನು ಆತ್ಮೀಯವಾಗಿ ಸ್ವಾಗತಿಸಿದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು,ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು ಉಪಸ್ಥಿತರಿದ್ದರು

ಶಿವಮೊಗ್ಗ, ಜೂ.06:
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಶಿವಮೊಗ್ಗದ ಜಿಲ್ಲಾಡಳಿತ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡುತ್ತಿದ್ದರು. ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ, ಕಾನೂನುರೀತ್ಯ ಕ್ರಮ ಜರುಗಿಸಲಾಗುವುದು ಎಂದರು.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ


ಸರ್ಕಾರವು ಕೊರೋನ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯದಾದ್ಯಂತ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಹಾಗೂ ಬೆಳೆದ ಬೆಳೆಯಿಂದ ರೈತರಿಗೆ ಉಂಟಾಗದಂತೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆ ತಮ್ಮ ಕೃಷಿ ಉತ್ಪನ್ನಗಳಾದ ಹೂವು ಹಣ್ಣು ತರಕಾರಿಗಳನ್ನು ಮಾರಾಟಮಾಡಲು ಹಾಗೂ ಬೀಜ ರಸಗೊಬ್ಬರಗಳನ್ನು ಖರೀದಿಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ ಎಂದ ಅವರು ಜಿಲ್ಲೆಯ ಗಡಿಭಾಗಗಳಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ರೈತರು ಯಾವುದೋ ಒಂದೇ ಒಂದು ಬೆಳೆಯನ್ನು ಆಶ್ರಯಿಸದೆ ತಮ್ಮ ಹೊಲಗಳಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ ಅವರು, ಜಿಲ್ಲೆಯ ಕೆಲವು ಭಾಗಗಳಲ್ಲಿ ನಕಲಿ ಸಾವಯವ ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಮುಂದಿನ ದಿನಗಳಲ್ಲಿ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುವವರನ್ನು ಗುರುತಿಸಿ ಗಂಡನಿಗೆ ಗುರಿಪಡಿಸಲಾಗುವುದು ಎಂದರು.
ಕಳೆದ ಸಾಲಿನಲ್ಲಿ ಕ್ರಾಪ್ ಸರ್ವೆ ತಂತ್ರಾಂಶ ಅಭಿವೃದ್ಧಿ ಪಡಿಸಿದ ನಂತರ ರೈತರಿಗೆ ಬಹು ಉಪಯುಕ್ತವಾಗಿದೆ ಕಳೆದ ಸಾಲಿನಲ್ಲಿ ಕೋಟಿಗೂ ಹೆಚ್ಚು ಜನ ರೈತರು ಕ್ರಾಪ್ ಸರ್ವೆ ನಲ್ಲಿ ಭಾಗವಹಿಸಿದ್ದರು ಪ್ರಸ್ತುತ ರೈತರಿಗೆ ಉಪಯುಕ್ತವಾಗಿರುವ ಭೂಮಿ ತಂತ್ರಾಂಶ ವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಬಿ. ವೈ. ರಾಘವೇಂದ್ರ ಅವರು ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯ 43 ಸಾವಿರಕ್ಕೂ ಹೆಚ್ಚಿನ ಸರಿಗೆ ಗುಣಮಟ್ಟದ ತಾಡಪಾಲು ಗಳನ್ನು ವಿತರಿಸಿರುವುದು ಹರ್ಷದ ಸಂಗತಿ. ಅಲ್ಲದೆ ಮೊಬೈಲ್ ಮ್ಯಾಪನ್ನು ವಿನ್ಯಾಸಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಟ್ಟದ್ದು ರೈತರಿಗೆ ಉಪಯುಕ್ತವಾಗಿದೆ ಎಂದ ಅವರು, ರೈತರಿಗೆ ಅನುಕೂಲವಾಗುವಂತೆ ಪಹಣಿ ಡಾಟಾ ಎಂಟ್ರಿ ಕಾರ್ಯ ತ್ವರಿತವಾಗಿ ವಂತೆ ಅಧಿಕಾರಿಗಳಿಗೆ ಸೂಚಿಸಲು ಔಷಧ ಮತ್ತು ರಸಗೊಬ್ಬರಗಳನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಲು ರೈತರಿಗೆ ತರಬೇತಿ ನೀಡುವ ಅಗತ್ಯವಿದೆ ಎಂದವರು ನುಡಿದರು.

ಸಭೆಯಲ್ಲಿ ಶಾಸಕರು ಹೇಳಿದ್ದು…,

Exit mobile version