(ತುಂಗಾತರಂಗ ಹೊನ್ನಾಳಿ ವರದಿಗಾರನ ವಿಶೇಷ ವರದಿ)
ಹೊನ್ನಾಳಿ, ಜೂ.08,
ಇಲ್ಲಿನ ಪೋಲಿಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಪೇದೆ ಚಂದ್ರಕಲಾ (36) ಎಂಬುವರು ಮಂಗಳವಾರ ಮುಂಜಾನೆ ಶಿವಮೊಗ್ಗ ನಗರದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು.
ಮೃತರಿಗೆ ಕಳೆದ ಸುಮಾರು 15 ದಿನಗಳ ಹಿಂದೆ ಕೋವಿಡ್ ದೃಢವಾಗಿತ್ತು, ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದು ನಂತರದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು.
ಮೃತರು 2008ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದು, ತನ್ನ ಪತಿ ಭೋಜರಾಜ್ ಸಹ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ದಂಪತಿಗಳಿಬ್ಬರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕಳೆದ ಡಿಸೆಂಬರ್ 2020,ರಲ್ಲಿ ಭೋಜರಾಜ್ ಇವರನ್ನು ಹೊನ್ನಾಳಿ ಪೊಲೀಸ್ ಠಾಣೆಯಿಂದ ಚನ್ನಗಿರಿ ತಾಲೂಕು ಬಸವಪಟ್ಟಣ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಇಂತಹ ಕೋವಿಡ್ ಪರಿಸ್ಥಿತಿಯಲ್ಲಿ ಸಿಬ್ಬಂದಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡುವುದು ಇಲಾಖೆಗೆ ಅವಶ್ಯಕತೆ ಇತ್ತೇ? ಎಂಬ ಪ್ರಶ್ನೆ ಕಾಡುತ್ತಿದ್ದು, ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ದಂಪತಿಗಳಿಬ್ಬರನ್ನು ಒಂದೆಡೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡದೆ ಇರುವುದು ಸಹ ಈ ದುರಂತಕ್ಕೆ ಕಾರಣವಾಗಿತೇ ಎಂದು ಮೃತರ ಸಂಬಂಧಿಗಳು ಸಾರ್ವಜನಿಕವಾಗಿ ಪ್ರಶ್ನಿಸಿದ್ದಾರೆ.
ಮುಂದಿನ ದಿನಗಳಲ್ಲಾದರೂ ಇಲಾಖೆಯ ಹಿರಿಯ ಅಧಿಕಾರಿಗಳಾದ ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯಪ್ಪ ನವರು ಸಿಬ್ಬಂದಿಗಳ ನೆರವಿಗೆ ನಿಂತು ಇಂತಹ ದುರಂತ ಮರುಕಳಿಸದಂತೆ ಎಚ್ಚರವಹಿಸಲು ಸಾರ್ವಜನಿಕವಾಗಿ ಮನವಿ ಮಾಡಿಕೊಂಡಿದ್ದಾರೆ.
ಮೃತರು ಆರು ತಿಂಗಳು ಗರ್ಭಿಣಿಯಾಗಿದ್ದು. ಒಂದುವರೆ ವರ್ಷದ ಮಗು ಸಹ ಇರುವುದಾಗಿ ತಿಳಿದು ಬಂದಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ, ಒಂದೆಡೆ ನೌಕರಿ ಮಾಡುತ್ತಿದ್ದ ದಂಪತಿಗಳಿಬ್ಬರನ್ನು, ಪತಿಯ ವರ್ಗಾವಣೆ ಮಾಡುವ ಮೂಲಕ ಈ ಸಾವಿನ ದುರಂತಕ್ಕೆ ಪ್ರತ್ಯಕ್ಷ-ಪರೋಕ್ಷವಾಗಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರ ಕಾರಣೀಭೂತವಾಗಿತೇ?.
ಇಂತಹ ಕೋವಿಡ್ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ ರಾಜ್ಯದಲ್ಲಿ ಜನರಿಂದ ಶಹಬ್ಬಾಸ್ ಗಿರಿ ಪಡೆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹೊನ್ನಾಳಿ ತಾಲೂಕಿನ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ತನ್ನ ಕ್ಷೇತ್ರದಲ್ಲಿ ಇಂಥದ್ದೊಂದು ದುರಂತಕ್ಕೆ ಅವಕಾಶ ಮಾಡಿಕೊಡ ಬಾರದಿತ್ತು, ದುರಾದೃಷ್ಟವಶಾತ್ ನಡೆದುಹೋಗಿದೆ ಮುಂದಿನ ದಿನಗಳಲ್ಲಾದರೂ ಪೊಲೀಸ್ ಇಲಾಖೆಯ ನೆರವಿಗೆ ನಿಂತು ಇಂತಹ ಯಾವುದೇ ದುರಂತಗಳು ಮರುಕಳಿಸದಂತೆ ಕರೋನಾ ವಾರಿಯರ್ಸ್ ಗಳ ಸಂಕಷ್ಟದಲ್ಲಿಯೂ ಭಾಗಿಯಾಗಬೇಕಿದೆ.
ಮೃತರ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ ತಾಲೂಕಿನ ಹೆಚ್ ಕಡದಕಟ್ಟೆ ಗ್ರಾಮದಲ್ಲಿ ನಡೆಯಿತು ಎಂದು ಕುಟುಂಬ ಮೂಲದಿಂದ ತಿಳಿದುಬಂದಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಜೂ.14 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ. - ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. - ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ. - ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.