Site icon TUNGATARANGA

ಶಿವಮೊಗ್ಗ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ಪರೀಕ್ಷೆಗೆ ಈ ಕ್ರಮಗಳನ್ನು ಅನುಸರಿಸಿ


ಶಿವಮೊಗ್ಗ: ಆಸನ ವ್ಯವಸ್ಥೆ ಬಗ್ಗೆ ಮುಂಚಿತವಾಗಿ ತಿಳಿಸುವುದರಿಂದ ಮಕ್ಕಳು ಸೂಚನಾ ಫಲಕದ ಮುಂದೆ ಗುಂಪುಗಟ್ಟುವುದು ತಡೆಗಟ್ಟಬಹುದಾದ್ದರಿಂದ ಮುಂಚಿತವಾಗಿ ತಿಳಿಸಲು ವ್ಯವಸ್ಥೆ ಮಾಡಲಾಗಿದೆ. ಹಾಗೂ ಎರಡು ಮೂರು ಕಡೆ ಪರೀಕ್ಷಾ ವಿವರ ಕುರಿತು ಸೂಚನೆಗಳನ್ನು ಅಂಟಿಸಲು ತಿಳಿಸಲಾಗಿದೆ.
ವಿದ್ಯಾರ್ಥಿಗಳು ಮನೆಯಿಂದ ನೀರಿನ ಬಾಟಲಿ ಮತ್ತು ಅಪೇಕ್ಷೆ ಪಟ್ಟಲ್ಲಿ ಮನೆಯಿಂದ ಆಹಾರದ ಡಬ್ಬಿ ತರಲು ಅವಕಾಶವಿದೆ. ಪರೀಕ್ಷಾ ಕೇಂದ್ರಕ್ಕೆ ಬರಲು ಸಾರಿಗೆ ಸಂಪರ್ಕ ತೊಂದರೆ ಇರುವ ಮಕ್ಕಳನ್ನು ಗುರುತಿಸಿ ಕರೆತರಲು ವ್ಯವಸ್ಥೆ ಮಾಡುವಂತೆ ಬಿಇಓಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್. ವೈಶಾಲಿ ಸೂಚಿಸಿದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಳಗೆ ಪ್ರವೇಶಿಸುವ ಪ್ರದೇಶದಲ್ಲಿ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಆರು ಅಡಿ ಅಥವಾ ೨ ಮೀಟರ್ ದೈಹಿಕ ಅಂತರ ವನ್ನು ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡುವಂತೆ ಬಿಇಓ ರವರಿಗೆ ಸೂಚಿಸಲಾಗಿದೆ. ಒಂದು ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ಕೊಠಡಿಯಲ್ಲಿ ಗರಿಷ್ಟ ೧೨ ಮಕ್ಕಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಾಲ್ಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸಲು ಸೂಚಿಸಲಾಗಿದೆ.

Exit mobile version