Site icon TUNGATARANGA

ಭಾರಿ ಮಳೆ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಲ್ಲಿ ರೆಡ್ ಅಲರ್ಟ್!

Shivamogga Rain


ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 18ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 14 ಹಾಗೂ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 15, 16, 18ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.

Exit mobile version