Site icon TUNGATARANGA

ಅಡಿಕೆಯಲ್ಲಿ ಬೇರು ಹುಳುವಿನ ಬಾಧೆ – ಹತೋಟಿ ಕ್ರಮಗಳು


ಶಿವಮೊಗ್ಗ: ಬೇರು ಹುಳುಗಳು ಅಡಿಕೆ ಕೃಷಿ ಪರಿಸರದಲ್ಲಿನ ದೀರ್ಘಕಾಲಿಕ ಕೀಟಗಳಾಗಿದ್ದು, ರೈತರಿಗೆ ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ. ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಈ ಕೆಳಗಿನಂತೆ ನೀಡಿರುತ್ತಾರೆ.
ಬೇರು ಹುಳುಗಳು ತೇವಾಂಶವಿರುವ ಮಣ್ಣಿನ ಪದರದಲಿ,್ಲ ಗೋಡು ಮಣ್ಣಿನಿಂದ ಕೂಡಿದ ಹಳ್ಳದ ಪಕ್ಕದ ಮತ್ತು ಗದ್ದೆ ಜಮೀನಿನಲ್ಲಿ ಮಾಡಿದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಹುಳುಗಳು ಭೂಮಿಯೊಳಗಿದ್ದು, ಅಡಿಕೆ ಬೇರುಗಳನ್ನು ಕತ್ತರಿಸಿ ತಿನ್ನುವುದರಿಂದ ಗಿಡಗಳು ರೋಗಗ್ರಸ್ಥವಾದಂತೆ ಕಂಡುಬರುತ್ತವೆ. ಬಾಧೆಗೀಡಾದ ಮರಗಳಲ್ಲಿ ಎಲೆಗಳು ಹಳದಿಯಾಗಿ ಗರಿ ಮತ್ತು ಗೆಣ್ಣುಗಳು ಗಿಡ್ಡವಾಗಿ ಕಾಂಡದ ತುದಿ ಮೊನಚಾಗುತ್ತದೆ. ಇಳುವರಿ ಕಡಿಮೆಯಾಗುತ್ತಾ ನಂತರದ ದಿನಗಳಲ್ಲಿ ಮರಗಳು ಸಾಯುತ್ತವೆ.

ಹತೋಟಿ ಕ್ರಮಗಳು

ಇದಲ್ಲದೆ ತೋಟಗಳಿಗೆ ಕಲ್ಲುಗೊಚ್ಚು ಮಣ್ಣನ್ನು ಲಭ್ಯವಿರುವೆಡೆ ಹಾಕಬೇಕು. ಬೇರುಹುಳುಗಳ ಸಂಪೂರ್ಣ ನಿಯಂತ್ರಣ ಕಷ್ಟ ಸಾಧ್ಯವಾದರೂ ಸಮಗ್ರ ಹತೋಟಿ ಕ್ರಮಗಳನ್ನು 3-4 ವರ್ಷ ನಿರಂತರವಾಗಿ ಅನುಸರಿಸಿದರೆ ಹಾನಿಯನ್ನು ಕಡಿಮೆ ಮಾಡಿ ಇಳುವರಿ ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

Exit mobile version