ಹೊಳೆಹೊನ್ನೂರು: ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪಟ್ಟಣದಿಂದ ಹೊಳೆಭೈರನಹಳ್ಳಿ ಗ್ರಾಮಕ್ಕೆ
ಹೋಗುವ ರಸ್ತೆಗೆ ಅಡ್ಡಲಾಗಿ ಹರಿಯುವ ಹಳ್ಳದ ನೀರಿನಲ್ಲಿ ಪಟ್ಟಣದ ಅಗಸರಬೀದಿ ವಾಸಿ ಹನುಮಕ್ಕ (70) ಕೊಚ್ಚಿ ಹೋಗಿದ್ದಾರೆ.
ನಿನ್ನೆ ಬೆಳಗ್ಗೆ ತೋಟದ ಕಡೆ ಹೋಗುವಾಗ ಹನುಮಕ್ಕ ಹಳ್ಳದ ನೀರಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರು ಸೇತುವೆ ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.
ತಹಶೀಲ್ದಾರ್ ಪ್ರದೀಪ್ ಆರ್. ನಿಕ್ಕಮ್, ರಾಜಸ್ವ ನಿರೀಕ್ಷ ವೆಂಕಟಾಚಲ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟ್ಯಾನಿ ಫರ್ನಾಂಡಿಸ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರಶುರಾಮ್ ಕಟ್ಟೀಮನಿ ಸ್ಥಳಕ್ಕೆ ಭೇಟಿ ನೀಡಿದರು.