ಶಿವಮೊಗ್ಗ : ರೈತರ, ಕಾರ್ಮಿಕರ ಶ್ರೀಸಾಮಾನ್ಯನ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ರಾಜ್ಯದ ಪರವಾಗಿ ಸಂಸತ್ತಿನಲ್ಲಿ ತುಟಿಬಿಚ್ಚದ ಬಿಜೆಪಿ ಸಂಸದರುಗಳ ಮೌನ ನಡೆಯನ್ನು ಖಂಡಿಸಿ ಯುವ ಕಾಂಗ್ರೆಸ್ ನಿಂದ ಸಂಸದ ರಾಘವೇಂದರ ಅವರ ಮನೆ ಮುತ್ತಿಗೆ ಹಾಕಿದ 75ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡಿಗಡೆ ಮಾಡಲಾಯಿತು.
ಪೆಟ್ರೋಲ್ – ಡೀಸೆಲ್ ಬೆಲೆ,ಗ್ಯಾಸ್ ಸಿಲಿಂಡರ್ ದರ , ಅಗತ್ಯವಸ್ತುಗಳ ಬೆಲೆ ಏರಿಕೆ, ನೆರೆ ಪರಿಹಾರ , ರಾಜ್ಯಕ್ಕೆ ಬರಬೇಕಾದ ಜಿ.ಎಸ್.ಟಿ,ಕೊರೋನ ನಿರ್ವಹಣೆಯಲ್ಲಿ, ಕೋವಿಡ್ ಲಸಿಕೆ ನೀಡುವದರಲ್ಲಿ , ವಿಫಲವಾಗಿರುವುದನ್ನು ಮತ್ತು ಶಿವಮೊಗ್ಗ ಜಿಲ್ಲೆಯ ಸಂಸದರು ಸೇರಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತದೆ ಮೌನವಹಿಸಿರುವುದು ಖಂಡನೀಯ ಎಂದರು.
ದೇಶದಲ್ಲಿ ಅಚ್ಚೆ ದಿನ್ ತರುತ್ತೇನೆಂದು ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರ್ಕಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ದಿನನಿತ್ಯ ಪೆಟ್ರೋಲ್ – ಡೀಸೆಲ್ , ಅಡುಗೆ ಅನಿಲ ದರ ಏರಿಕೆ ಮಾಡುತ್ತಾ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳು ಕೂಡ ಏರಿಕೆ ಕಂಡು ಶ್ರೀಸಾಮಾನ್ಯ ಪರದಾಡುವಂತಾಗಿದೆ ಎಂದರು.
ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಕೊರೋನಾ ನಿರ್ವಹಣೆಯಲ್ಲಿ ಹಾಗೂ ಕೋವಿಡ್ ಲಸಿಕೆ ನೀಡುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಹಾಗೆಯೇ ಪೆಗಸಿಸ್ ಫೋನ್ ಕದ್ದಾಲಿಕೆಯಲ್ಲಿ ನೇರವಾಗಿ ಶಾಮೀಲಾಗಿರುವುದು ಎದ್ದು ತೋರುತ್ತಿದ್ದು ಕೇಂದ್ರ ಗುಪ್ತಚರ ಇಲಾಖೆಯು ಸಂಪೂರ್ಣ ನಿಷ್ಕ್ರಿಯವಾಗಿದೆ. ಈಗಾಗಲೇ ರೈತ ಹಾಗೂ ಕಾರ್ಮಿಕ ವಿರೋಧಿ ಅವೈಜ್ಞಾನಿಕ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದು ಜೊತೆಗೆ ಈಗಾಗಲೇ ವಿದ್ಯುತ್ ಕಾಯ್ದೆ ಮಸೂದೆ ತಿದ್ದುಪಡಿ ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ನೀತಿಯನ್ನು ಜಾರಿಗೆ ತರಲು ಹೊರಟಿರುವುದು ಹಾಗೂ ಕರ್ನಾಟಕ ರಾಜ್ಯಕ್ಕೆ ನೆರೆ ಪರಿಹಾರ, ಜಿ.ಎಸ್.ಟಿ ತೆರಿಗೆಯಿಂದ ಬರಬೇಕಾದ ಪರಿಹಾರದ ಹಣವನ್ನು ನೀಡದೇ ಮಲತಾಯಿ ಧೋರಣೆ ಮಾಡುತ್ತಿರುವುದು ಮತ್ತು ರಾಜ್ಯದಿಂದ ಗೆದ್ದಂತಹ 25 ಬಿಜೆಪಿ ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತದೆ ಮೌನವಹಿಸಿರುವುದು ತೀವ್ರ ಖಂಡನೀಯ ಎಂದರು.
ಪ್ರತಿಭಟನೆಯ ನೇತೃತ್ವವನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್ , ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ರಮೇಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಎ ಸ್. ರವಿ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್ , ರೇಖಾ ರಂಗನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.