ಬೆಂಗಳೂರು: ರಾಜ್ಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ನಿನ್ನೆಯೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.