ಇದುವೇ ಸ್ಪೆಷಲ್ ಸುದ್ದಿ, ಮತ್ತೆ ಲಾಕ್ ಡೌನಿಗೆ ಹತ್ತಿರ
ಶಿವಮೊಗ್ಗ, ಆ.06:
ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಹಾಗೂ ಮೂರನೇ ಅಲೆ ಅಪ್ಪಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಲಾಕ್ಬಡೌನ್ ಪೂರ್ವಭಾವಿ ವ್ಯವಸ್ಥೆಗೆ ಕೈ ಹಾಕಿದೆ.
ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಗೈಡ್ಲೈನ್ಸ್ ಶುಕ್ರವಾರವಾದ ಇಂದಿನ ರಾತ್ರಿ 9 ಗಂಟೆಯಿಂದ ಆರಂಭ ಆಗಲಿದೆ.
ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ.
ಅಗತ್ಯವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಆ ವೇಳೆ, ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಖರೀದಿಗೆ ಅವಕಾಶ ನೀಡಲಾಗುತ್ತದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಲಾಗಿದೆ. ದಿನದ 24 ಗಂಟೆಯೂ ಹೋಮ್ ಡೆಲಿವರಿಗೆ ಅವಕಾಶ ಇರಲಿದೆ.
ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಲಾಗಿದೆ. ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ವೀಕೆಂಡ್ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರುತ್ತೆ. ರೈಲು, ವಿಮಾನ ಟಿಕೆಟ್ ತೋರಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಮದುವೆಯಲ್ಲಿ 100 ಜನರು ಭಾಗಿಯಾಗಲು ಅವಕಾಶ ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನ ಭಾಗಿಯಾಗಲು ಅವಕಾಶ ಕೊಡಲಾಗಿದೆ.
ಜಾತ್ರೆ, ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ದೇಗುಲಗಳಲ್ಲಿ ಪೂಜೆ ಮಾಡುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೊವಿಡ್ ನಿಯಮ ಪಾಲಿಸಿ ಪೂಜೆ ಮಾಡಲು ಅವಕಾಶ ನೀಡಲಾಗಿದೆ. ಆದರೆ ದೇಗುಲಗಳಲ್ಲಿ ಜಾತ್ರೆ, ಮೆರವಣಿಗೆಗೆ ಅವಕಾಶವಿಲ್ಲ ಎಂದು ಸೂಚನೆ ನೀಡಲಾಗಿದೆ. ಅಗತ್ಯವಸ್ತುಗಳ ಕೈಗಾರಿಕೆಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ.
ಮಿಕ್ಕ ಮಾಹಿತಿ ನಿರೀಕ್ಷೆಯಲ್ಕಿ