Site icon TUNGATARANGA

ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ ಏರಿಕೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಬಾರೀ ಮಳೆ ತುಂಬಿದ ಶರಾವತಿ

ಶಿವಮೊಗ್ಗ, ಆ.11
ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟ ಏಕಪ್ರಕಾರವಾಗಿ ಏರುತ್ತಿದ್ದು, ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವ ಇರುವುದರಿಂದ ಅಣೆಕಟ್ಟೆಯ ಕೆಳದಂಡೆ ಹಾಗೂ ನದಿ ಪಾತ್ರದುದ್ದಕ್ಕೂ ಇರುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಕೋರಲಾಗಿದೆ.


ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು ಆಗಸ್ಟ್ 12 ರಂದು ಬೆಳಿಗ್ಗೆ 8 ಗಂಟೆಗೆ ನೀರಿನ ಮಟ್ಟ 1812 ಅಡಿಗಳನ್ನು ತಲುಪಿದೆ. ಜಲಾಶಯವು ಶೇ.85 ರಷ್ಟು ಭರ್ತಿಯಾಗಿದ್ದು, ಈ ದಿನದ ಲಿಂಗನಮಕ್ಕಿ ಜಲಾಶಯದ ಒಳಹರಿವು 11,174 ಕ್ಯೂಸೆಕ್ಸ್ ಆಗಿರುತ್ತದೆ. ಇದೇ ರೀತಿ ಜಲಾಶಯಕ್ಕೆ ನೀರಿನ ಒಳ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮದಯಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು.
ಆದ ಕಾರಣ ಅಣೆಕಟ್ಟೆಯ ಕೆಳದಂಡೆ ಹಾಗೂ ನದಿ ಪಾತ್ರದ ಉದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಪ್ರಕಟಣೆ ತಿಳಿಸಿದೆ
.

Exit mobile version