Site icon TUNGATARANGA

ನಡೆದಾಡುವ ದೇವರ ನೆನಪು: ಇನ್ಮುಂದೆ ಜ.21 ರಂದು ದಾಸೋಹ ದಿನ

ಬೆಂಗಳೂರು :
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21 ನ್ನು ದಾಸೋಹ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2 ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದರು. ಈ ಹಿನ್ನೆಲೆ ಇದೀಗ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21 ನ್ನು ದಾಸೋಹ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.
(ಸಂಗ್ರಹ)

Exit mobile version