ಸಾಗರ: ಪ್ರವಾಸಿಗರು ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಕೋವಿಡ್ ನೆಗಟಿವ್ ದೃಢೀಕರಣ ಪತ್ರ ಹಾಜರುಪಡಿ ಸಬೇಕಿಲ್ಲ’ ಎಂದು ಪ್ರವಾಸೋದ್ಯಮ ಇಲಾ ಖೆಯ ಜಂಟಿ ಕಾರ್ಯದರ್ಶಿ ಎಚ್. ಎಸ್.ರಾಮಕೃಷ್ಣ ತಿಳಿಸಿದರು.
ಜಲಪಾತ ದರ್ಶನಕ್ಕೆ ಬರುವ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡಿರಬೇಕು. ಈ ಬಗ್ಗೆ ಪ್ರಾಧಿಕಾರದ ಪ್ರಧಾನ ದ್ವಾರದಲ್ಲಿ ಪರಿಶೀಲಿಸಲಾಗುವುದು. ಕನಿಷ್ಠ, ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿರಲೇಬೇಕು. ಇಲ್ಲದಿದ್ದಲ್ಲಿ ಅವರಿಗೆ ಲಸಿಕೆಯ ಮಹತ್ವವನ್ನು ತಿಳಿಸಿಕೊಡಲಾಗುವುದು’ ಎಂದು ತಿಳಿಸಿದರು.
ಜೋಗದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರವು ಉನ್ನತ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸುತ್ತಿದೆ. ಶೀಘ್ರವೇ ನೂತನ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಹೇಳಿದರು.