Site icon TUNGATARANGA

DCC ಬ್ಯಾಂಕ್ ಮಂಜುನಾಥ ಗೌಡರಿಗೆ ಮತ್ತೆ ಸುತ್ತಿಕೊಂಡಿತೇ ಹಳೇ ಹಗರಣ….!

ಶಿವಮೊಗ್ಗ,ಸೆ.26:
ಡಿಸಿಸಿ ಬ್ಯಾಂಕ್ ಗಾಂಧಿ ಬಜಾರ್ ಶಾಖೆಯಲ್ಲಿ 2014ರಲ್ಲಿ ನಡೆದ ಚಿನ್ನ ಅಡಮಾನ ಸಾಲದ ಹಗರಣಕ್ಕೆ ಸಂಬಂಧಿಸಿದಂತೆ ಆರ್‌.ಎಂ. ಮಂಜುನಾಥಗೌಡ ವಿರುದ್ಧ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಡಿಸಿಸಿ ಬ್ಯಾಂಕ್‌ ಹಗರಣವನ್ನು ಮರು ತನಿಖೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದರು. ಗಾಂಧಿ ಬಜಾರ್‌ ಶಾಖೆಯಲ್ಲಿ ಬ್ಯಾಂಕ್‌ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಸೇರಿ ನಕಲಿ ಬಂಗಾರ ಅಡವಿಟ್ಟು ₹ 62.77 ಕೋಟಿ ವಂಚಿಸಿದ್ದರು ಎಂಬ ಆರೋಪವಿತ್ತು.
ಪ್ರಕರಣ ಬೆಳಕಿಗೆ ಬಂದ ನಂತರ ಅಂದಿನ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು, ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಸೇರಿ 18 ಜನರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಸಿಐಡಿಗೆ ತನಿಖೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿಯು ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡರಿಗೆ ಕ್ಲೀನ್‌ಚಿಟ್ ನೀಡಿತ್ತು.


ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿ ದಾಖಲಾತಿ, ಸಾಕ್ಷಿಗಳ ಹೇಳಿಕೆಗಳ ಆಧಾರ ಮೇಲೆ ಆರೋಪಿಗಳಾದ ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡ ಹಾಗೂ ಪ್ರಧಾನ ವ್ಯವಸ್ಥಾಪಕ ನಾಗಭೂಷಣ್ ವಿರುದ್ಧ ಆರೋಪಗಳು ಸಾಬೀತಾದ ಕಾರಣ ಇವರ ವಿರುದ್ಧ ದೋಪಲೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

Exit mobile version