Site icon TUNGATARANGA

ಸಕ್ರಿಯ ರಾಜಕಾರಣಕ್ಕೆ ಶಾರದಾ ಅಪ್ಪಾಜಿ ಎಂಟ್ರಿ/ ಭದ್ರಾವತಿಯಲ್ಲಿ ಹೊಸ ರಾಜಕೀಯ ಕಹಳೆ ಆರಂಭ

ಭದ್ರಾವತಿ:
ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಪತ್ನಿ ಶಾರದ ಅಪ್ಪಾಜಿ ಶನಿವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದರು.
ಸೆ.21 ರಂದು ತಾಲೂಕಿನ ಗೋಣಿಬೀಡಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಶಾರದ ಅಪ್ಪಾಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ ನಂತರ ಇದೆ.

ವೇದಿಕೆಯಲ್ಲಿ ಮಾತನಾಡಿದ, ಶಾರದ ಅಪ್ಪಾಜಿ ಅ.2 ರ ಗಾಂಧಿ ಜಯಂತಿಯಂದು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಂದಿನ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವುದಾಗಿ ಘೋಷಿಸಿದ್ದರು. ಅದರಂತೆ ಮಹಾತ್ಮಗಾಂಧಿ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮುಂದಿನ ರಾಜಕೀಯ ಜೀವನ ಪತಿ ಅಪ್ಪಾಜಿಯವರ ಆದರ್ಶತನಗಳನ್ನು ಮೈಗೂಡಿಸಿ ಕೊಂಡು ಮುನ್ನಡೆಯುತ್ತೇನೆ ಎಂದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು, ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು.

Exit mobile version