Site icon TUNGATARANGA

ಶಿವಮೊಗ್ಗ: ಇನ್ಮುಂದೆ ಗಾಂಜಾ ಸೇವಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುವುದು ಸುಲಭವಲ್ಲ!

ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸ್‌ ಅಧಿಕಾರಿಗಳು ಗಾಂಜಾ ಸೇವನೆ ಪತ್ತೆಗೆ ಕಿಟ್‌ ‍ಪರೀಕ್ಷೆಯ ಮೊರೆ ಹೋಗಿದ್ದಾರೆ.
ಜಿಲ್ಲೆಯಲ್ಲಿ ಗಾಂಜಾ ಸೇವನೆ ವಿಪರೀತವಾಗಿದೆ.

ಸೇವನೆ ಕುರಿತು ದಾಖಲೆಗಳಿಲ್ಲದ ಕಾರಣ ಪ್ರಕರಣ ದಾಖಲಿಸುವುದು ಕಷ್ಟವಾಗಿದೆ. ಹೀಗಾಗಿ ಬೆಂಗಳೂರಿನಿಂದ ಗಾಂಜಾ ಸೇವನೆ ಪತ್ತೆ ಕಿಟ್‌ಗಳನ್ನು ತರಿಸಿ ಪ್ರಯೋಗ ಆರಂಭಿಸಲಾಗಿದೆ.


ಪರೀಕ್ಷೆ ಹೇಗೆ?: ಮಾದಕ ದ್ರವ್ಯ ವ್ಯಸನಿಗಳ ಮೇಲೆ ನಿಗಾ ಇರಿಸಲು ವಿಶೇಷ ಟೆಸ್ಟಿಂಗ್ ಕಿಟ್‌ ವಿತರಿಸಲಾಗಿದೆ. ಮಾದಕ ದ್ರವ್ಯವನ್ನು ಸೇವನೆ ಮಾಡಿದ ವ್ಯಕ್ತಿಗಳ ಮೂತ್ರವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೂಡಲೇ ಪಾಸಿಟಿವ್ ಇಲ್ಲವೇ ನೆಗೆಟಿವ್ ಫಲಿತಾಂಶವನ್ನು ನೀಡುತ್ತದೆ. ಪರೀಕ್ಷೆ ವೇಳೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ₹ 10 ಸಾವಿರ ದಂಡ ಹಾಗೂ 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌ ವಿವರಿಸಿದರು.


ಮೊದಲ ದಿನ ಎರಡು ಪ್ರಕರಣ: ಶನಿವಾರ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿದ್ದು, ಅವರ ಪರೀಕ್ಷಾ ವರದಿಯು ಪಾಸಿಟಿವ್ ಬಂದ ಕಾರಣ ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

Exit mobile version