Site icon TUNGATARANGA

ಹಿರಿಯ ನಟ, ಸಾಹಿತಿ ಪ್ರೊ. ಜಿ.ಕೆ. ಗೋವಿಂದರಾವ್ ನಿಧನ


ಬೆಂಗಳೂರು:
ಕನ್ನಡದ ಹಿರಿಯ ನಟ ಹಾಗೂ ಸಾಹಿತಿ ಪ್ರೊ.ಜಿ.ಕೆ.ಗೋವಿಂದ ರಾವ್ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.


ಕಳೆದ ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯಗಳಿಂದ ಅವರು ಬಳಲುತ್ತಿದ್ದರು. ಆದರೂ ತಮ್ಮ ರಂಗ ಚಟುವಟಿಕೆ ಹೋರಾಟಗಳಲ್ಲಿ ಅವರು ಸಕ್ರಿಯರಾಗಿದ್ದರು.
ಸಾಹಿತ್ಯ ಕ್ಷೇತ್ರದಲ್ಲಿ ಕೂಡ ಸಾಧನೆ ಮಾಡಿರುವ ಜಿ.ಕೆ.ಗೋವಿಂದ ರಾವ್, ​, ಈಶ್ವರ ಅಲ್ಲಾ ಎಂಬ ಕಿರು ಕಾದಂಬರಿ, ಶೇಕ್ಸ್​ಪೀಯರ್​ ನಾಟಕ ಅಧ್ಯಯನ, ಶೇಕ್ಸ್​ಪೀಯರ್​ ಸಂವಾದ ಲೇಖನ ಮಾಲಿಕೆ, ನಡೆ ನುಡಿ ನಾಗರಿಕತೆ, ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್​​ ಮೊದಲಾದ ಕೃತಿಗಳನ್ನು ಬರೆದಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಿ.ಕೆ. ಗೋವಿಂದರಾವ್ ಅವರಿಗೆ ಸಂತಾಪ ಸೂಚಿಸಿದ್ದಾರೆ.

Exit mobile version