ಶಿವಮೊಗ್ಗ : ಸಾಗರ ತಾಲೂಕಿನ ಹುಲಿದೇವರ ಬನದಲ್ಲಿರುವ ಎಂಪಿಎಂ ಅರಣ್ಯ ಪ್ರದೇಶದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಮರದ ಲಾಟು ಹರಿದು ಸಾವುಕಂಡಿರುವ ಘಟನೆ ವರದಿಯಾಗಿದೆ.
ಪ್ರಕರಣದ ವಿವರ :
ನಿನ್ನೆ ಸಂಜೆ ಮರಗಳನ್ನ ಕಡಿದು ಒಂದರ ಮೇಲೊಂದು ಮರದ ದಿಮ್ಮಿಗಳ ಸಿಪ್ಪೆ ಸುಲಿದು ಜೋಡಿಸಿ ಇಡಲಾಗಿತ್ತು. ಮರದ ದಿಮ್ಮಿಯ ಕೆಳಗೆ 6 ವರ್ಷದ ಹೆಣ್ಣು ಮಗು ಆಡುತ್ತಿದ್ದ ವೇಳೆ ಜೋಡಿಸಿದ ಮರದ ದಿಮ್ಮಿ ಚದುರಿಹೋಗಿದ್ದು ಮಗುವಿನ ಮೇಲೆ ಹರಿದಿದೆ.
ತೀವ್ರವಾಗಿ ಗಾಯಗೊಂಡಿದ್ದ ಈ ಮಗುವನ್ನ ಸಾಗರದ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಗು ಕೊನೆ ಉಸಿರು ಎಳೆದಿದೆ. ಮಗುವನ್ನ ಶ್ರಾವಣಿ ಎಂದು ಗುರುತಿಸಲಾಗಿದೆ. ಧಾರವಾಡದ ಕಲಘಟಗಿಯಿಂದ ಕಳೆದ ಮೂರು ತಿಂಗಳ ಹಿಂದೆ ಮರಕಡಿಯುವ ಕೆಲಸಕ್ಕೆ ಬಂದ ವೇಳೆ ದಂಪತಿಗಳು ತಮ್ಮ ಮೂರನೇ ಮಗುವನ್ನ ಕಳೆದುಕೊಂಡಿದ್ದಾರೆ.