ಶಿವಮೊಗ್ಗ : ಸೊರಬ ತಾಲ್ಲೂಕಿನ ಆನವಟ್ಟಿಯ ತವನಂದಿ ಅರಣ್ಯ ವ್ಯಾಪ್ತಿಯಲ್ಲಿ ಜಿಂಕೆ ಭೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ನಾಲ್ವರು ಪರಾರಿಯಾಗಿರುವ ಘಟನೆ ವರದಿಯಾಗದೆ.
ಬಂಧಿತ ಆರೋಪಿ ನಾರಾಯಣ ಕೆರೆಕೊಪ್ಪ ಗ್ರಾಮದ ನಿವಾಸಿಯಾಗಿದ್ದು, ಇವರನ್ನು ಬಂಧಿಸಿ ಸೊರಬ ನ್ಯಾಯಾಲಯ ಹಾಜರುಪಡಿಸಲಾಗಿದೆ.
ಇನ್ನುಳಿದ ಆರೋಪಿಗಳಾದ ಬೂದ್ಯಪ್ಪ, ನಾಗಪ್ಪ, ಆಸೀಫ್, ಫೈಯಾಜ್ ಅವರ ತಲೆಮರಿಸಿಕೊಂಡಿದ್ದು, ಅವರ ಬಂಧನಕ್ಕೆ ಬಲೆಬಿಸಿದ್ದಾರೆ.
ಕಾರ್ಯಾಚರಣೆಯಲ್ಲಿ 10 ಕೆ.ಜಿ. ಜಿಂಕೆ ಮಾಂಸ, ಎರಡು ಕತ್ತಿ, ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಚರಣೆ ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್‌ಕುಮಾರ್, ಸೊರಬ ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್‌ಕುಮಾರ್ ಬಸ್ರೂರ್ ಅವರ ಮಾರ್ಗದರ್ಶನದಲ್ಲಿ ಅವರ ತಂಡ ನೇತೃತ್ವವಹಿಸಿತ್ತು.