Site icon TUNGATARANGA

ಡಿ.29 ರಂದು ಶಿವಮೊಗಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಬರ್ತಾರೆ…..

ಶಿವಮೊಗ್ಗ: ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ

ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ.29ರಂದು ಕುವೆಂಪು ರಂಗಮಂದಿರದಲ್ಲಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ, ಹೆಚ್.ನರಸಿಂಹಯ್ಯನವರ ಜನ್ಮ ಶತಮಾನೋತ್ಸವ ಹಾಗೂ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ರಾಜ್ಯಮಟ್ಟದ – ಹೆಚ್.ಎನ್ ಪ್ರಶಸ್ತಿ ಪ್ರದಾನ ಸಾಧಕರಿಗೆ ಹಾಗೂ ರಾಜ್ಯಮಟ್ಟದ ಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ಪರಿಷತ್ನ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ್ ತಿಳಿಸಿದರು. 

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂತರಾಷ್ಟ್ರೀಯ ಖ್ಯಾತಿಯ ಹೆಸರಾಂತ ವಿಜ್ಞಾನಿ ಹಾಗೂ ಭಾರತ ಸರ್ಕಾರದ ಇಸ್ರೋದ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್. ಕಿರಣ್ ಕುಮಾರ್ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು ಸಮ್ಮೇಳನದ ಹೆಗ್ಗಳಿಕೆಯಾಗಿದೆ. ಅಂದು ಬೆಳಿಗ್ಗೆ 10ಗಂಟೆಗೆ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರು ಉದ್ಘಾಟಿಸುವರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಆಶಯನುಡಿಗಳನ್ನಾಡಲಿದ್ದು ಖ್ಯಾತ ವಿಜ್ಞಾನಿ ಡಾ.ಎ.ಎಸ್.ಕಿರಣ್ ಕುಮಾರ್ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವರು. ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಜ್ಞಾನ ಸಿರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪರಿಷತ್ನ ಸದಸ್ಯತ್ವ ಮ್ಯಾಪ್ನ್ನು ಬಿಡುಗಡೆ ಮಾಡುವರು, ಗೃಹ ಸಚಿವ ಅರಗ ಜ್ಞಾನೇಂದ್ರ 2022ರ ಕ್ಯಾಲೆಂಡರ್ ಬಿಡುಗಡೆಗೊಳಿಸುವರು, ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ.ಅಶ್ವತ್ ನಾರಾಯಣ ವಿಜ್ಞಾನ ಗ್ರಾಮಕ್ಕೆ ಚಾಲನೆ ನೀಡುವರು ಎಂದರು.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯದ ವಿವಿಧ ಲೇಖಕರ ಕೃತಿಗಳನ್ನು ಬಿಡುಗಡೆಗೊಳಿಸುವರು, ಸಂಸದ ಬಿ.ವೈ.ರಾಘವೇಂದ್ರ ಕೆಎಸ್ಎಸ್ಆರ್ಸಿಯ ವೆಬ್ಸೈಟ್ ಲೋಕಾರ್ಪಣೆಗೊಳಿಸುವರು. ಶಾಸಕರಾದ ಹೆಚ್.ಹಾಲಪ್ಪ ಹರತಾಳು, ಕುಮಾರ್ ಬಂಗಾರಪ್ಪ,ಕೆ.ಬಿ.ಅಶೋಕ್ ನಾಯ್ಕ್, ಬಿ.ಕೆ.ಸಂಗಮೇಶ್, ರುದ್ರೇಗೌಡರು, ಆಯನೂರು ಮಂಜುನಾಥ, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಕಾಡಾದ ಅಧ್ಯಕ್ಷೆ ಪವಿತ್ರ ರಾಮಯ್ಯ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ.ಸಿಇಓ ವೈಶಾಲಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್, ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷ ರಾಜೇಂದ್ರ ಆವಿನಹಳ್ಳಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ರಾಜ್ಯಮಟ್ಟದ ಸಾಧನಾ ಪ್ರಶಸ್ತಿ: ಇದೇ ಸಂದರ್ಭದಲ್ಲಿ ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಟ ದೊಡ್ಡಣ್ಣ, ಸಮಾಜ ಸೇವಕ ತಿಪಟೂರಿನ ಡಾ.ಶ್ರೀಧರ್ ಕುಮಾರ್, ಬೆಂಗಳೂರಿನ ಖ್ಯಾತ ವೈದ್ಯ ಡಾ.ಟಿ.ಹೆಚ್.ಆಂಜನಪ್ಪ, ಬೆಂಗಳೂರಿನ ಪದ್ಮನಾಭ ಗಡ, ತುಮಕೂರಿನ ಜಿ.ಡಿ.ನಂದಿನಿ ಮೋಹನ್ ಕುಮಾರ್, ದಿಲೀಪ್ ಕುಮಾರ್ ಇವರಿಗೆ ರಾಜ್ಯಮಟ್ಟದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. 

ರಾಜ್ಯಮಟ್ಟದ ವಿಚಾರ ಗೋಷ್ಠಿ: ಮಧ್ಯಾಹ್ನ 2 ಗಂಟೆಗೆ ವಿಶ್ವ ಕವಿ ಕುವೆಂಪು ಹಾಗೂ ಹೆಚ್.ನರಸಿಂಹಯ್ಯ ನವರ ಕುರಿತಾಗಿ ರಾಜ್ಯಮಟ್ಟದ ವಿಚಾರಗೋಷ್ಠಿಯನ್ನು ಆಯೋಜಿಸಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು ಕವಿ ಕುವೆಂಪು ಹಾಗೂ ಹೆಚ್.ಎನ್ ಕುರಿತು ಖ್ಯಾತ ಸಾಹಿತಿ ಡಾ.ಕುಂ.ವೀರಭದ್ರಪ್ಪ ಮಾತನಾಡಲಿದ್ದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅಧ್ಯಕ್ಷತೆ ಸಹಿಸುವರು. ವೇದಿಕೆಯಲ್ಲಿ ಶಾಸಕರಾದ ಬೆಳ್ಳಿ ಪ್ರಕಾಶ್, ಶರತ್ ಬಚ್ಚೇಗೌಡ, ಕ್ಯಾಮ್ಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ರೈತ ಮುಖಂಡೆ ಸುನಂದ ಜಯರಾಮ್, ಮಂಡ್ಯಲೋಕ ಶಕ್ತಿಯ ಚಂದ್ರಶೇಖರ್ ಸ್ಥಾವರಮಠ, ಕೆ.ವೀರೇಶ್, ಕೆ.ಎಸ್. ಈಶ್ವರಯ್ಯ, ಹೈಕೋರ್ಟ್ ವಕೀಲ ದಾಸರಿ ಗೋವಿಂದ ಮೊದಲಾದವರು ಉಪಸ್ಥಿತರಿರುವರು ಎಂದರು.

ರಾಜ್ಯಮಟ್ಟದ ಮಹಾಧಿವೇಶನ: ಸಂಜೆ 4ಕ್ಕೆ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಎಸ್.ಕಿರಣ್ ಕುಮಾರ್ ಅವರ ಉಪಸ್ಥಿತಿಯಲ್ಲಿ ರಾಜ್ಯ ಮಟ್ಟದ ಮಹಾಧಿವೇಶನವನ್ನು ಆಯೋಜಿಸಿದ್ದು ಈ ಸಭೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಯ ಹಾಗೂ ತಾಲ್ಲೂಕು ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದರು.ಸಮಾರೋಪ ಸಮಾರಂಭ: ಸಂಜೆ 5 ಕ್ಕೆ ಸಮಾರೋಪ ಸಮಾರಂಭದಲ್ಲಿ ರಾಜ್ಯಮಟ್ಟದ ಹೆಚ್.ಎನ್.ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರ ಸಾನ್ನಿಧ್ಯದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ವಿಪಕ್ಷನಾಯಕರಾದ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಸಮ್ಮೇಳನಾಧ್ಯಕ್ಷರಾದ ಡಾ.ಎ.ಎಸ್.ಕಿರಣ್ ಕುಮಾರ್ ಉಪಸ್ಥಿತರಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡವರು. ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ: ಬಿ.ಪಿ.ವೀರಭದ್ರಪ್ಪ ಸಮಾರೋಪ ನುಡಿಗಳನ್ನಾಡಲಿದ್ದು, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಡಿ.ಕೆ.ರಾಮಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಷಿ, ಎಂಐಡಿಬಿ ಅಧ್ಯಕ್ಷ ಗುರುಮೂರ್ತಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮೊದಲಾದವರು ಉಪಸ್ಥಿತರಿರುವರು ಎಂದರು.

ಕುಪ್ಪಳಿಯಿಂದ ವೈಜ್ಞಾನಿಕ ಜಾಥಾ: ಅಂದು ಬೆಳಿಗ್ಗೆ ಕುಪ್ಪಳ್ಳಿಯ ಕುವೆಂಪುರವರಿಗೆ ಪುಷ್ಪನಮನ ಸಲ್ಲಿಸುವ ಮೂಲಕ ರಾಮಾಯಣ ದರ್ಶನಂ ಕೃತಿಯೊಂದಿಗೆ ವೈಜ್ಞಾನಿಕ ಜಾಥಾವು ಆಗಮಿಸಲಿದ್ದು ಇದು ರಾಜ್ಯಾದ್ಯಂತ ಸಂಚರಿಸಲಿದೆ ಎಂದರು.ರಾಜ್ಯಮಟ್ಟದ ಹೆಚ್.ಎನ್. ಪ್ರಶಸ್ತಿ ಪುರಸ್ಕೃತರು:ಇದೇ ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ ಹೆಚ್.ಎನ್ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ವಿಶೇಷ ಪ್ರಶಸ್ತಿಗೆ ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಶರಣರು ಹಾಗೂ ಮರಣೋತ್ತರವಾಗಿ ಪುನಿತ್ ರಾಜ್ ಕುಮಾರ್ ಇವರಿಗೆ ನೀಡಲಾಗುತ್ತಿದ್ದು, ಹಾಗೂ ರಾಜ್ಯದ ಶೈಕ್ಷಣಿಕ ಜಿಲ್ಲಾವಾರು ಹೆಚ್.ಎನ್. ಪ್ರಶಸ್ತಿ ನೀಡಲಾಗುತ್ತಿದೆ ಎಂದರು.ಸಂಜೆ 6ಕ್ಕೆ ಟಿವಿ ಹರಟೆ ಖ್ಯಾತಿಯ ಇಂದುಮತಿ ಸಾಲಿಮಠ ಇವರಿಂದ ಹಾಸ್ಯ ಸಂಜೆ, ಸುಗಮ ಸಂಗೀತ, ಜಾನಪದ, ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಟಿ.ಸ್ವಾಮಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ರಾಜೇಂದ್ರ ಆವಿನಹಳ್ಳಿ, ರಾಜ್ಯಸಮಿತಿಯ ಹನುಮಂತೇಗೌಡ, ಮೋಹನ್ ಕುಮಾರ್, ಗೌರಿ ಪ್ರಸನ್ನಕುಮಾರ್, ರೇಣುಕಾ ಪ್ರಸಾದ್,ನಾಗರಾಜ್ ಸಂಗಮ್ ಇನ್ನಿತರರು ಹಾಜರಿದ್ದರು

Exit mobile version