Site icon TUNGATARANGA

ಬಕ್ರೀದ್ ಸಾಮೋಹಿಕ ಪ್ರಾರ್ಥನೆಗೆ ನಿರ್ಬಂಧ


ಶಿವಮೊಗ್ಗ,ಜು.25:
ರಾಜ್ಯಾದ್ಯಂತ ಕೆಲವು ಜಿಲ್ಲೆಗಳಲ್ಲಿ ಜುಲೈ 31ರಂದು ಹಾಗೂ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಆಗಸ್ಟ್ 1ರಂದು ನಡೆಯುವಂತಹ ಬಕ್ರೀದ್ ಆಚರಣೆಯ ಸಾಮೂಹಿಕ ಪ್ರಾರ್ಥನೆಯನ್ನು ಈದ್ಗಾಹ್ ಗಳಲ್ಲಿ ಆಚರಿಸುವುದನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2020ನೇ ಬಕ್ರೀದ್ ಹಬ್ಬ ಆಚರಿಸುವ ಕುರಿತು ಕರ್ನಾಟಕ ಸರ್ಕಾರ ತನ್ನ ನಡಾವಳಿಯನ್ನು ಬಿಡುಗಡೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ಭಾರತ ಸರ್ಕಾರ ಇವರ ಅಧಿಕೃತ ಜ್ಞಾಪನ ಸಂಖ್ಯೆ ಅನುಸಾರ ಈಗಾಗಲೇ ಕರ್ನಾಟಕ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ಅಂದು ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಇಚ್ಚಿಸುವಂತಹ ಮಸೀದಿಗಳ ಆಡಳಿತ ಸಮಿತಿಗಳು ದಿನಾಂಕ 6-6-2020ರ ಆದೇಶದನ್ವಯ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆಯಾ ಮಸೀದಿಗಳಲ್ಲಿ ಗರಿಷ್ಠ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು. ಒಂದು ವೇಳೆ ಅಧಿಕ ಜನರು ಆಗಮಿಸಿದ್ದರೆ, ಎರಡು ಅಥವಾ ಮೂರು ಬ್ಯಾಚ್ ಗಳಲ್ಲಿ ಆಯಾ ಮಸೀದಿಗಳಲ್ಲಿ ನಮಾಜ್ ಮಾಡಲು ನಿರ್ದೇಶನ ನೀಡಲಾಗಿದೆ.
ಯಾವುದೇ ಮಸೀದಿಯ ಆಡಳಿತ ಮಂಡಳಿಯು ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರದ ನಮಾಜು ಪ್ರಾರ್ಥನೆ ಸಹಿತ ದಿನದ ಐದು ಹೊತ್ತಿನ ಸಾಮೂಹಿಕ ಪ್ರಾರ್ಥನೆಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು ಅಂತಹ ಮಸೀದಿ ಆಡಳಿತ ಸಮಿತಿಗಳು ಸದರಿ ನಿರ್ಧಾರವನ್ನು ಬಕ್ರೀದ್ ನಮಾಜ್ ನಲ್ಲಿ ಬದಲಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ಗಮನಹರಿಸಲು ಸೂಚನೆ ನೀಡಿದೆ.

ಸೂಚನೆ
ಪ್ರಾರ್ಥನೆ ಸ್ಥಳದಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಹಾಕ ತಕ್ಕದ್ದು. 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಮಾಡುವುದು. ನಮಾಜ್ ನಿರ್ವಹಿಸುವ ಮಧ್ಯ ಕನಿಷ್ಠ ಆರು ಅಡಿ ಅಂತರ ಕಾಯ್ದುಕೊಳ್ಳುವುದು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡುವುದು. ಕೈಗಳನ್ನು ಸೋಪಿನಿಂದ ಶುಚಿಗೊಳಿಸುವುದು. ಧರ್ಮಗ್ರಂಥಗಳನ್ನು ಮುಟ್ಟುವಂತಿಲ್ಲ. ತಮ್ಮ ತಮ್ಮ ಮನೆಗಳಿಂದ ಮುಸಲ್ಲಾದೊಂದಿಗೆ ಬರುವುದು. ಅಪರಿಚಿತರ ಬಂದರೆ ಅವರ ಬಗ್ಗೆ ವಿಶೇಷ ಗಮನ ಹರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದೆ.

Exit mobile version