Site icon TUNGATARANGA

ಆರಗ ಜ್ಞಾನೇಂದ್ರರಿಗೆ ಕೆ.ಹೆಚ್.ಬಿ, ಹರತಾಳು ಹಾಲಪ್ಪರಿಗೆ ಎಂ.ಎಸ್. ಐ.ಎಲ್ ಅಧ್ಯಕ್ಷಗಿರಿ

ಶಿವಮೊಗ್ಗ,ಜು.27 : ಕರ್ನಾಟಕ ಸರ್ಕಾರ ಒಂದು ವರ್ಷದ ಅಧಿಕಾರ ಅವಧಿ ಪೂರೈಸಿದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 24 ಶಾಸಕರಿಗೆ ಹಲವು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಅಂತೆಯೇ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರನ್ನು ಎಂ.ಎಸ್ ಐ.ಎಲ್.ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಇದೇ ಸಂದರ್ಭದಲ್ಲಿ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈಗಾಗಲೇ ನಿಗಮ ಮಂಡಳಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದರಿಂದ ಖಾಲಿ ಉಳಿದಿರುವ ನೇಮಕಾತಿ ಹುದ್ದೆಗಳಿಗೆ ಬಾರಿ ದೊಡ್ಡ ಲಾಬಿ ಆರಂಭಗೊಂಡಿದೆ. ಶಿವಮೊಗ್ಗ ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಹಾಗೂ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಲವರು ಕಣ್ಣಿಟ್ಟಿದ್ದಾರೆ.

Exit mobile version