Site icon TUNGATARANGA

ನದಿಜೋಡಣೆ, ರಾಜ್ಯಕ್ಕೆ ಉಪಯೋಗವಾಗುವ ನಿಟ್ಟಿನ ಚರ್ಚೆಗೆ ಈಶ್ವರಪ್ಪ ಮನವಿ

ಶಿವಮೊಗ್ಗ:
ನದಿ ಜೋಡಣೆಗೆ ರಾಜ್ಯಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಚರ್ಚೆ ಆಗಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ನದಿ ಜೋಡಣೆಗೆ ಸಂಬಂಧಿಸಿದಂತೆ ಯಾರೂ ಚಿಂತನೆ ಮಾಡುತ್ತಿಲ್ಲ. ಇದು ಚರ್ಚೆಯಾಗುವುದು ಒಳ್ಳೆಯದು. ಏನೇ ಆದರೂ ನಮ್ಮ ರಾಜ್ಯಕ್ಕೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ರಾಜ್ಯದ ಹಿತಾಸಕ್ತಿ ಬಲಿಕೊಟ್ಟು ಯೋಜನೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ನದಿ ಜೋಡಣೆಯಿಂದ ನಮ್ಮ ರಾಜ್ಯಕ್ಕೆ ಎಷ್ಟು ನೀರು ಸಿಗುತ್ತದೆ ಎಂದು ನೋಡಿಕೊಂಡೇ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇನೆ ಎಂದಿದ್ದಾರೆ ಎಂದರು.


ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಹೆಚ್.ಕೆ. ಪಾಟೀಲ್, ಸಿದ್ಧರಾಮಯ್ಯ ಮುಂತಾದವರು ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಇದರಿಂದ ರಾಜ್ಯಕ್ಕೆ ಏನೂ ಒಳ್ಳೆಯದಾಗುವುದಿಲ್ಲ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಗೋವಾ ಚುನಾವಣೆ ಸಂದರ್ಭದಲ್ಲಿ ಗೋವಾದಲ್ಲಿ ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡುವುದಿಲ್ಲ ಎಂದು ಹೇಳಿದ್ದನ್ನು ರಾಜ್ಯದ ಕಾಂಗ್ರೆಸ್ ನಾಯಕರು ಏಕೆ ಮರೆತಿದ್ದಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಇದರ ನಡುವೆಯೂ ನದಿ ಜೋಡಣೆಯಿಂದ ನೀರಾವರಿ ಸೌಲಭ್ಯ ಹೆಚ್ಚಲಿದೆ. ಒಣ ಬೇಸಾಯ ಮಾಡುವವರಿಗೆ ಅನುಕೂಲವಾಗಲಿದೆ. ಕುಡಿಯುವ ನೀರು ಸಿಗಲಿದೆ. ಒಟ್ಟಾರೆ 9 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಸಿಗಲಿದೆ. ಇದೊಂದು ರೈತ ಪರ ಯೋಜನೆಯಾಗಿದೆ. ಪರಿಸರವಾದಿಗಳು ಇದನ್ನು ವಿರೋಧಿಸಬಹುದು. ಆದರೆ, ಪ್ರಸ್ತು ನದಿ ಜೋಡಣೆ ಅನಿವಾರ್ಯ ಮತ್ತು ಅಗತ್ಯವಾಗಿದೆ ಎಂದರು.
ಬಜೆಟ್ ಗೆ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ ಇದೊಂದು ಅತ್ಯುತ್ತಮ ಬಜೆಟ್ ಆಗಿದೆ. ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ಕರ್ನಾಟಕಕ್ಕೆ ಏನು ಸಿಕ್ಕಿದೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಪ್ರಧಾನಿ ಮೋದಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕವಾಗಿ ಹಣ ಬಿಡುಗಡೆ ಮಾಡಿಲ್ಲ. ಸುಮಾರು 400 ವಂದೇ ಭಾರತ್ ಟ್ರೈನ್ ಗಳನ್ನು ಬಿಡಲಿದ್ದು, ಇದು ರಾಜ್ಯಕ್ಕೆ ಸಿಗಲಿದೆ. 80 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದು, ಕರ್ನಾಟಕವನ್ನು ಬಿಟ್ಟು ಈ ಮನೆಗಳು ನಿರ್ಮಾಣ ಆಗುವುದಿಲ್ಲ. ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಕುಡಿಯುವ ನೀರು, ಸೋಲಾರ್, ಉದ್ಯೋಗ ಸೃಷ್ಠಿ, ನರೇಗಾ ಯೋಜನೆಗೆ ಮತ್ತಷ್ಟು ಹಣ ಬಿಡುಗಡೆ ಮಾಡಲಾಗಿದೆ. ಈ ಯೋಜನೆಗಳು ರಾಜ್ಯಕ್ಕೆ ಸಿಗುವುದಿಲ್ಲವೇ ಎಂದು ಪ್ರಶ್ನಿಸಿದರು.


ಕಾಂಗ್ರೆಸ್ ಪಕ್ಷದ ಕೆಲವು ಮುಂಖಂಡರು ಪ್ರಧಾನಿ ಮೋದಿ ರಾಷ್ಟ್ರವನ್ನು ಮಾರಾಟಕ್ಕೆ ಇಟ್ಟಿದ್ದಾರೆ ಎಂದು ಟೀಕೆ ಮಾಡುತ್ತಾರೆ. ಆದರೆ, ಪ್ರಧಾನಿ ಮೋದಿ ಅವರು ಇರುವ ಸಾಲಗಳನ್ನೆಲ್ಲಾ ತೀರಿಸಿ ಸುಮಾರು 15 ದೇಶಗಳಿಗೆ ಸಾಲ ಕೊಟ್ಟಿದ್ದಾರೆ. ಇದು ಕಾಂಗ್ರೆಸ್ ನವರಿಗೆ ಏಕೆ ಅರ್ಥವಾಗುತ್ತಿಲ್ಲ. ಟೀಕೆಗಾಗಿ ಟೀಕಿಸುವುದು ಕಾಂಗ್ರೆಸ್ ನವರ ಹುಟ್ಟು ಗುಣವಾಗಿದೆ ಎಂದರು.
ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಚುಟುಕಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ಆಗುತ್ತೋ, ಪುನಾರಚನೆ ಆಗುತ್ತೋ ನಾನು ಹೇಗೆ ಹೇಳಲಿ. ಸ್ವತಃ ಮುಖ್ಯಮಂತ್ರಿಯವರಿಗೆ ಇದು ತಿಳಿದಿರಕ್ಕಿಲ್ಲ. ಹಾಗೇನಾದರೂ ಆದರೆ, ಮಾದ್ಯಮದರಿಗೇ ಮೊದಲು ತಿಳಿಯುತ್ತದೆ ಎಂದರು.

Exit mobile version