ಶಿವಮೊಗ್ಗ:
ನಗರದಲ್ಲಿ ಉಲ್ಬಣಗೊಂಡಿರುವ ಗಲಭೆ ಸಂಫೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಶುಕ್ರವಾರದವರೆಗೂ ಕರ್ಫ್ಯೂವನ್ನು ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಶುಕ್ರವಾರದವರೆಗೂ ಕಫ್ಯೂ ಹಾಗೂ ಸೆಕ್ಷನ್ ಮುಂದುವರೆಸಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಶುಕ್ರವಾರದವರೆಗೂ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.