Site icon TUNGATARANGA

ಇನ್ನೂ ಭಾರೀ ಮಳೆ, ಶಿವಮೊಗ್ಗ ಸೇರಿದಂತೆ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಶಿವಮೊಗ್ಗ, ಆ.5:
ಕರಾವಳಿ ಮತ್ತು ಸಿಹಿಮೊಗೆಯ ಮಲೆನಾಡು ಭಾಗಗಳಲ್ಲಿ ಮುಂದೆ ಇನ್ನೂ ಭಾರೀ ಮಳೆ ಬೀಳುವ ಹಿನ್ನಲೆಯಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅದರಂತೆ ಶಿವಮೊಗ್ಗದಲ್ಲಿಯೂ ರೆಡ್ ಅಲೆರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದೆ ಇನ್ನಷ್ಟು ಮಳೆ ವ್ಯಾಪಕವಾಗಿ ಬೀಳುವ ಮುನ್ನಚ್ಚರಿಕೆಯನ್ನ ಹವಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಶಿವಮೊಗ್ಗ ಸೇರಿದಂತೆ 7 ಜಿಲ್ಲೆಯ ಜಿಲ್ಲಾಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಹಾಗೂ ಶಿವಮೊಗ್ಗದ ಜಿಲ್ಲಾಧಿಕಾರಿಗಳು ಮಳೆಯ‌ ಮುನ್ನೆಚ್ಚರಿಕೆಯ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದಾರೆ.
ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನದಿ, ಕೆರೆ ದಂಡೆಯಲ್ಲಿರುವವರು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ನದಿ ಅಥವಾ ಕೆರೆಗಳ ಸಮೀಪ ತೆರಳಬಾರದು. ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ನದಿ, ಕೆರೆ ದಂಡೆಯಲ್ಲಿರುವವರು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ನದಿ ಅಥವಾ ಕೆರೆಗಳ ಸಮೀಪ ತೆರಳಬಾರದು. ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ.

Exit mobile version