ಶಿವಮೊಗ್ಗ,ಮಾ.14:
ಶಾಲೆಯಲ್ಲಿ ಸಮವಸ್ತ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾ. 15 ನಾಳಿನ ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ.
ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ ೧೪೪ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ.
ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಂದೂಡಿಕೆ
ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು, ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದಿದ್ದಾರೆ.
ಕೆಇಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ (ಶಿವಮೊಗ್ಗದ ಎಚ್’ಎಸ್‌ಆರ್ ಪದವಿ ಪೂರ್ವ ಕಾಲೇಜು, ಸರಕಾರಿ ಪಪೂ ಕಾಲೇಜು, ಸರಕಾರಿ ಬಾಲಿಕಾ ಪಪೂ ಕಾಲೇಜು,) ಮಂಗಳವಾರ ನಡೆಯಲಿವೆ.