Site icon TUNGATARANGA

ಹಿಜಾಬ್ ವಿಚಾರ, ಸುಪ್ರೀಂ ಮೊರೆಗೆ ನಿರ್ಧಾರ…, ಅಲ್ಲಿಯವರೆಗೆ ಹೈಕೋರ್ಟ್ ಆದೇಶ ಪಾಲನೆ ಕಡ್ಡಾಯ, ಈಗ ಕೇಳಿರುವ ಸಮಯ ಕೊಡುತ್ತಾ ಹೈಕೋರ್ಟ್…?

ಬೆಂಗಳೂರು:
ಹೈಕೋರ್ಟ್ ನಿಂದ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿರುವವರು ಮುಂದಿನ ಆದೇಶದವರೆಗೆ ಹೈಕೋರ್ಟ್ ಆದೇಶ ಪಾಲನೆ ಮಾಡುವುದು ಕಡ್ಡಾಯವಾಗಿದೆ.
ಇದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಬಾರದು, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು, ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ. ಹಾಗೆಯೆರ ಸಮಯ ಕೋರಿವೆ.
ಈಗ ವರ್ಷದ ಕೊನೆಯಾದ್ದರಿಂದ ಶಾಲಾ-ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆಯ ಸಮಯವಿದು, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗುತ್ತಿರುವುದರಿಂದ ಅಲ್ಲಿಂದ ತೀರ್ಪು ಬರುವವರೆಗೆ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಿ ಎಂದು ಕೆಲ ವಿದ್ಯಾರ್ಥಿನಿಯರು ಹಾಗೂ ಇತರರು ಒತ್ತಾಯಿಸುತ್ತಿದ್ದಾರೆ.


ಆದರೂ ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಿ ಪರೀಕ್ಷೆ ಬರೆಯುವುದಾಗಿ ಕೆಲ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ.
ಹಿಜಾಬ್ ಧರಿಸಲು ಅವಕಾಶ ನೀಡದ ಸರ್ಕಾರದ ವಿರುದ್ಧ ಸಲ್ಲಿಸಲಾಗಿರುವ ರಿಟ್ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ.

Exit mobile version