ಶಿವಮೊಗ್ಗ, ಮೇ.23:ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ ಗೌರವ ಕೊಡುತ್ತಾನೋ ಆ ವ್ಯಕ್ತಿಯ ಬದುಕು ಹಸನಾಗುವುದು, ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಜೊತೆ...
ಗ್ರಾಮೀಣ
rural news
ಹುಡುಕಾಟದ ವರದಿಶಿವಮೊಗ್ಗ, ಮೇ.23:ಶಿವಮೊಗ್ಗ ನಗರದ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ, ಅದರಲ್ಲೂ ವೈದ್ಯಕೀಯ ವಿಜ್ಞಾನ ಕಾಲೇಜನ್ನು ಹೊಂದಿರುವ ಮೆಗಾನ್ ಆಸ್ಪತ್ರೆಗೆ ಏನಾಗಿದೆ?ಆಸ್ಪತ್ರೆಯ ಯಜಮಾನ...
NSUI, ABVPಯಂತಹ ವಿದ್ಯಾರ್ಥಿ ಸಂಘಟನೆಗಳಲ್ಲಿ ಬೆಳೆದು “ಹೀರೋ” ಆಗುವ ಕನಸು ಕೈಬಿಡಿ, ಎಸ್ಪಿ ದಿನೇಶ್ ಹೀಗೆ ಹೇಳಿದ್ದೇಕೆ?
NSUI, ABVPಯಂತಹ ವಿದ್ಯಾರ್ಥಿ ಸಂಘಟನೆಗಳಲ್ಲಿ ಬೆಳೆದು “ಹೀರೋ” ಆಗುವ ಕನಸು ಕೈಬಿಡಿ, ಎಸ್ಪಿ ದಿನೇಶ್ ಹೀಗೆ ಹೇಳಿದ್ದೇಕೆ?
ಶಿವಮೊಗ್ಗ, ಮೇ.23:NSUI, ABVPಯಂತಹ ವಿದ್ಯಾರ್ಥಿ ಸಂಘಟನೆಗಳಲ್ಲಿ ಬೆಳೆದು “ಹೀರೋ” ಆಗುವ ಕನಸು ಕಾಣಬೇಡಿ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್. ಪಿ....
ಶಿವಮೊಗ್ಗ,ಮೇ.21:ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಅವಾಂತರಗಳು ಅರ್ಧಗಂಟೆ ಮಳೆ ಬಿದ್ದರೆ ಬೆತ್ತಲಾಗುವುದು ಖಚಿತ.ಏಕೆಂದರೆ ಈಗಾಗಲೇ ಎರಡು ಬಾರಿ ಬಿದ್ದ ಅಲ್ಪ ಸ್ವಲ್ಪ ಮಳೆಗೆ...
ಶಿವಮೊಗ್ಗ, ಮೇ 20: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ, ಶಾಂತಿನಗರ, ದೇವಿಕೊಪ್ಪರಸ್ತೆ, ಮನೆ ನಂ.08ರಲ್ಲಿ ವಾಸಿ ಹೋಂ ನರ್ಸ್ ಐಶ್ವರ್ಯ...
ಮೈಸೂರು ಮೇ 15: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎಂ ರಮೇಶ್ ಶೆಟ್ಟಿ...
(ಕ್ಯೂಆರ್ ಕೋಡ್ ಲಗತ್ತಿಸಿದೆ) ಶಿವಮೊಗ್ಗ: ಇಂದಿನ ಶೈಕ್ಷಣಿಕ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಗಣಿತದ ಮೂಲಭೂತ ಪಾಠಗಳನ್ನು ಕಲಿಯಲು ತೀರಾ ಕಡಿಮೆ ಅವಕಾಶವಿದ್ದು ಈ ಹಿನ್ನೆಲೆಯಲ್ಲಿ...
ಆನಂದಪುರ : ಸಮೀಪದ ಹೊಸೂರು ಗ್ರಾಮ ಪಂಚಾಯಿತಿಯ ಹೊನಗೋಡಿನಲ್ಲಿ ಇದೇ ಶನಿವಾರ ಸಂಜೆ ಪ್ರಪ್ರಥಮ ಬಾರಿಗೆ “ಹೊನಗೋಡು ಸ್ವರಮೇಧಾ ಉತ್ಸವ” ಆಯೋಜನೆಗೊಂಡಿದೆ. ಸ್ವರಮೇಧಾ ಸಂಸ್ಥೆಯಿಂದ ನಡೆಯುತ್ತಿರುವ ಈ ಸಂಗೀತೋತ್ಸವಕ್ಕೆ ರಾಜ್ಯಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ಗಾಯಕ ಗುಡ್ಡಪ್ಪ ಜೋಗಿ ಅವರು ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಸ್ವರಮೇಧಾ ಸಂಗೀತ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ನೂತನವಾಗಿ ನಿರ್ಮಾಣಗೊಂಡಿರುವ “ಸ್ವರಮೇಧಾ ವಿಶ್ವಸಂಗೀತ ಸಭಾಂಗಣಮ್” ಎಂಬ ಹೆಸರಿನ ಹೊರಾಂಗಣ ವೇದಿಕೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸಂಜೆ 4.30 ಕ್ಕೆ ಆರಂಭವಾಗಲಿರುವ ಈ ಉತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿರುವ ಯುವ ಕಲಾವಿದರು ಕರ್ನಾಟಕ ಶಾಸ್ತ್ರೀಯ ಸಂಗೀತದ ಗಾಯನವನ್ನು ನಡೆಸಿಕೊಡಲಿದ್ದಾರೆ. ಪಕ್ಕವಾದ್ಯದಲ್ಲಿ ಸುಶ್ರುತ ಭಾರದ್ವಾಜ್ ಅವರ ಪಿಟೀಲು ಹಾಗೂ ಶ್ರೀನಿಧಿ ಬಿ.ಜಿ ಅವರ ಮೃದಂಗ ವಾದನವಿರಲಿದೆ. ನಂತರದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹಾಲಾಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾಗರದ ಪರಿಣಿತಿ ಕಲಾಕೇಂದ್ರದ ನಾಟ್ಯಾಚಾರ್ಯರಾದ ವಿದ್ವಾನ್ ಗೋಪಾಲ್ ಅವರು ಆಶಯ ಭಾಷಣವನ್ನು ಮಾಡಲಿದ್ದಾರೆ. ಸ್ವರಮೇಧಾ ಸಂಸ್ಥೆಯ ಗೌರವ ಸಲಹೆಗಾರರಾದ ಹಿರಿಯ ಸಂಗೀತ ವಿದ್ವಾಂಸ ಹೊಸಹಳ್ಳಿ ಜಿ ಅನಂತ ಅವಧಾನಿ, ಹೊನಗೋಡು ಗ್ರಾಮಸ್ಥರಾದ ಉದ್ಯಮಿ ಮಧುಕರ ನರಸಿಂಹ ಹೆಗಡೆ, ಪ್ರಗತಿಪರ ಕೃಷಿಕ ಎಸ್ ಮೃತ್ಯುಂಜಯ ರಾವ್, ಸ್ವರಮೇಧಾ ಸಂಸ್ಥಾಪಕ, ವಿಶ್ವದಾಖಲೆ ವಿಜೇತ ಯುವ ಸಂಗೀತ ನಿರ್ದೇಶಕ, ಗಾಯಕ ಡಾ. ಚಿನ್ಮಯ ಎಂ.ರಾವ್, ಸ್ವರಮೇಧಾ ಸಂಸ್ಥೆಯ ಅಧ್ಯಕ್ಷರಾದ ಲೆಕ್ಕ ಪರಿಶೋಧಕ ಸಿ.ಎ ಭರತ್ ರಾವ್ ಕೆ.ಎಸ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿರಲಿದ್ದಾರೆ. ಕಡೆಯದಾಗಿ ಮೂರು ಗಂಟೆಗಳ ಕಾಲ ಪ್ರಮುಖ ಆಕರ್ಷಣೆಯಾಗಿ ಪ್ರಖ್ಯಾತ ಹರಿಕಥಾ ಕಲಾವಿದರಾದ ಹಡಿನಬಾಳಿನ ಹಿರಿಯ ಹರಿದಾಸರಾದ ವಿದ್ವಾನ್ ಗಣಪತಿ ಹೆಗಡೆ ಇವರಿಂದ ಭಗವಾನ್ ಸದ್ಗುರು ಶ್ರೀ ಶ್ರೀಧರಸ್ವಾಮಿಗಳವರ ಶ್ರೀ ಶ್ರೀಧರ ಗುರುಚರಿತ್ರೆಯ ಹರಿಕಥಾ ಕಾರ್ಯಕ್ರಮ ನಡೆಯಲಿದೆ. ಸಂವಾದಿನಿಯಲ್ಲಿ ಅರುಣ್ ಭಟ್ ಮೂರೂರು ಹಾಗೂ ತಬಲಾದಲ್ಲಿ ಗಜಾನನ ಯಾಜಿ ಮಣ್ಣಿಗೆ ಪಕ್ಕವಾದ್ಯದಲ್ಲಿ ಸಹಕರಿಸಲಿದ್ದಾರೆ. ಸ್ವರಮೇಧಾ ಸಂಸ್ಥಾಪಕ ಡಾ. ಚಿನ್ಮಯ ಎಂ.ರಾವ್ ಅವರ ಪರಿಕಲ್ಪನೆಯಂತೆ “ಹೊನಗೋಡು ಸ್ವರಮೇಧಾ ಉತ್ಸವ” : ಸಂಗೀತವೆಂದರೆ ಪ್ರಕೃತಿ. ಪ್ರಕೃತಿಯಲ್ಲೇ ಸಂಗೀತವಿದೆ. ಪ್ರಕೃತಿಯಲ್ಲೇ ಜಾತಿ, ಧರ್ಮ, ದೇಶ, ಭಾಷೆ, ಮೇಲು ಕೀಳು, ಬಡವ ಬಲ್ಲಿದ ಎಲ್ಲವನ್ನೂ ಮೀರಿದ ಸೌಂದರ್ಯವಿದೆ. ಆ ಸೌಂದರ್ಯದಲ್ಲೇ ಆಧ್ಯಾತ್ಮವಿದೆ. ಪ್ರಕೃತಿಯಲ್ಲೇ ಸಂಗೀತ, ಸಂಗೀತದಲ್ಲೇ ಸೌಂದರ್ಯ, ಸೌಂದರ್ಯದಲ್ಲೇ ಆಧ್ಯಾತ್ಮ ಎಲ್ಲವೂ ಒಂದರೊಳಗೊಂದು ಅಡಕವಾಗಿದೆ. ಮಲೆನಾಡಿನ ಮಡಿಲಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊನಗೋಡು ಎಂಬ ಪುಟ್ಟ ಹಳ್ಳಿಯೊಂದರಲ್ಲಿ ಪ್ರಕೃತಿಯ ಸೌಂದರ್ಯದೊಳಗಿರುವ ಸಂಗೀತದ ಆಧ್ಯಾತ್ಮವಿದೆ. ಸ್ವರಮೇಧಾ ಎಂಬ ವಿಶಿಷ್ಠ ಚಿಂತನೆಯಿಂದ ಕೂಡಿದ ಸಂಗೀತದ ಪರಂಪರೆಯೊಂದು ಇಲ್ಲಿ ಜನಿಸಿರುವುದೇ ಇದಕ್ಕೆ ಬಹು ದೊಡ್ಡ ಸಾಕ್ಷಿ. ಇಂತಹ ಪ್ರಕೃತಿ, ಇಂತಹ ಸಂಗೀತ, ಇಂತಹ ಸೌಂದರ್ಯ, ಇಂತಹ ಆಧ್ಯಾತ್ಮವನ್ನು ಹೊನಗೋಡಿನಿಂದ ವಿಶ್ವದಾದ್ಯಂತ ತಲುಪಿಸುವ ಉತ್ಸವವೇ “ಹೊನಗೋಡು ಸ್ವರಮೇಧಾ ಉತ್ಸವ”.
ನಾನು ಪತ್ರಿಕೋದ್ಯಮಕ್ಕೆ ಬರುವ ಮುನ್ನವೇ ಗುರುತಿಸಿದ ಕೆಲವರಲ್ಲಿ ಒಬ್ಬರೆಂದರೆ ಅದರಲ್ಲಿ ಶಶಿಧರ್ ಒಬ್ಬರು.ಭಾರತೀಯ ಜನತಾ ಪಕ್ಷದ ಕಾಣದ ವ್ಯಕ್ತಿ ಶಶಿಧರ್ ಅವರು ಇಂದು...
ಹೊಳೆಹೊನ್ನೂರು,ಮೇ.14: ದಲಿತರ ಭೂಮಿಯನ್ನು ಎಂಪಿಎಂ ನವರು ಆಕ್ರಮಿಸಿದ್ದಾರೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಅಂಬೇಡ್ಕರ್ ವಾದ ) ವತಿಯಿಂದ ಆಹೋರಾತ್ರಿ ಧರಣಿ...