Tungataranga News, April 14, 2022 | ವಿಶೇಷ ಸುದ್ದಿ

ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಧಾರ ಪ್ರಕಟ

ಶಿವಮೊಗ್ಗ, ಏ. 14: ಬೆಳಗಾವಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ.
ಶಿವಮೊಗ್ಗ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.


ಬುಧವಾರವಷ್ಟೇ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ತಿಳಿಸಿದ್ದರು.


ಇದೀಗ ಬಿಜೆಪಿ ವರಿಷ್ಠರ ಸೂಚನೆಯಂತೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.

By admin

ನಿಮ್ಮದೊಂದು ಉತ್ತರ

error: Content is protected !!