ಶಂಕರಘಟ್ಟ, ಏ. 18: ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 19ರಂದು ಬೆಳಿಗ್ಗೆ 10.30ಕ್ಕೆ ಜ್ಞಾನಸಹ್ಯಾದ್ರಿಯ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಡಾ. ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಸಾಹಿತಿ ಡಾ. ನಟರಾಜ್ ಹುಳಿಯಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಅಂಬೇಡ್ಕರ್ ಚಿಂತನೆ ಮತ್ತು ವಿಚಾರಧಾರೆಗಳ ಕುರಿತು ವಿಶ್ವವಿದ್ಯಾಲಯದ ಪ್ರಸಾರಾಂಗ ಹೊರತಂದಿರುವ 14 ಕೃತಿಗಳು ಇದೇ ಸಂದರ್ಭದಲ್ಲಿ ಲೋಕಾರ್ಪಣೆಯಾಗಲಿವೆ. ಹಿರಿಯ ಸಾಹಿತಿ ಪ್ರೊ. ಎಚ್. ಲಿಂಗಪ್ಪ ಕೃತಿಗಳ ಬಗ್ಗೆ ಮಾತನಾಡಲಿದ್ದಾರೆ.
ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ.ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್. ಕೆ. ನವೀನ್ ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಪ್ರಸಾರಾಂಗದ ನಿರ್ದೇಶಕಿ ಡಾ. ರೇಚಲ್ ಬಾರಿ ಭಾಗವಹಿಸಲಿದ್ದಾರೆ ಎಂದು ಕೇಂದ್ರದ ನಿರ್ದೇಶಕ ಪ್ರೊ. ಅಂಜನಪ್ಪ ತಿಳಿಸಿದ್ದಾರೆ.