ಶಿವಮೊಗ್ಗ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದ ಗೆಟ್ಟಿಲ್ಲ. ಎಲ್ಲವೂ ಸರಿ ಇದೆ. ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಶಿವಮೊಗ್ಗಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಘಟನೆಗೆ ಕಾರಣ ರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾ ಗುವುದು. ಈಗಾಗಲೇ ಪೊಲೀಸ್ ಇಲಾಖೆ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈ ಹಿಂದೆ ಡಿಜೆ ಹಳ್ಳಿಯಲ್ಲಿ ಆದ ಗಲಾಟೆಗೆ ಸಂಬಂಧಿ ಸಿದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಈ ಪ್ರಕರಣವನ್ನು ಸಹ ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ನಿಧಿ ಸಂಗ್ರಹಿಸುತ್ತಿರುವುದರ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವ ಯಾವ ಸಂಘಟನೆಯವರು ಏನು ಬೇಕಾದರೂ ಮಾಡಿಕೊಳ್ಳಲಿ. ಇದಕ್ಕೂ ನಮಗೂ ಸಂಬಂಧವಿಲ್ಲ ಎಂದರು.
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ದಲ್ಲಿಯಂತೆ ಬುಲ್ಡೋಜಾರ್ ಮಾದರಿ ಕರ್ನಾಟಕದಲ್ಲೂ ಜಾರಿಯಾಗಬೇಕು ಎಂದು ನಿಮ್ಮ ಸಂಪುಟದ ಸಚಿವರೇ ಹೇಳುತ್ತಿದ್ದಾರೆ. ಬುಲ್ಡೋಜಾರ್ ಎಂದರೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಯಾವ ಯಾವ ಸ್ಥಳದಲ್ಲಿ ಪರಿಸ್ಥಿತಿ ಏನಿರುತ್ತದೋ ಅದಕ್ಕೆ ಅನುಗುಣವಾಗಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಇದರ ಜೊತೆಗೆ ನ್ಯಾಯಾಲಯದ ಆದೇಶಗಳನ್ನು ಕೂಡ ಪರಿಪಾಲಿಸಬೇಕು ಎಂದರು.
ಪಂಚಮಸಾಲಿ ಸಮುದಾಯದ ಮೀಸಲಾ ತಿಗೆ ಸಂಬಂಧಿಸಿದಂತೆ ಸ್ವಾಮೀಜಿಗಳು ನೀಡಿದ್ದ ಗಡುವು ಮುಗಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಷಯ ಹಿಂದುಳಿದ ವರ್ಗಗಳ ಆಯೋಗದ ಮುಂದಿದೆ. ಅವರು ಸರಿಯಾದ ನಿರ್ಧಾವರನ್ನು ತೆಗೆದುಕೊಳ್ಳುತ್ತಾರೆ ಎಂದರು