ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರಕ್ಕಾಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನ ಹಲವು ಮುಖಂಡರನ್ನು ಗೃಹಬಂಧನದಲ್ಲಿ ಇಟ್ಟ ಘಟನೆ ನಡೆದಿದೆ.


ಇಂದು ಬೆಳ್ಳಂಬೆಳಗ್ಗೆಯೇ ಯುವ ಕಾಂಗ್ರೆಸ್, ಎನ್.ಎಸ್.ಯು.ಐ ಸೇರಿದಂತೆ ಯುವಮುಖಂಡರಿಗೆ ಶಾಕ್ ಕಾದಿತ್ತು. ಬೆಳಿಗ್ಗೆ ೬ ಗಂಟೆಗೆಲ್ಲಾ ಮುಖಂಡರುಗಳ ಮನೆ ಮುಂದೆ ಹಾಜರಾದ ಪೊಲೀಸರು, ಮುಖ್ಯಮಂತ್ರಿಗಳ ಕಾರ್ಯಕ್ರಮ ಇರುವುದರಿಂದ ನೀವು ಇಂದು ಮನೆಯಲ್ಲೇ ಇರಬೇಕು ಎಂದು ಮನವಿ ಮಾಡಿದರು.


ಕಾರ್ಯಕ್ರಮ ಮುಗಿಯುವ ವರೆಗೂ ಮನೆಯಿಂದ ಹೊರಬರುವಂತಿಲ್ಲ ತಾಕೀತು ಮಾಡಿದ ಪೊಲೀಸರು ಮುಖಂಡರ ಮನೆ ಮುಂದೆ ಕುರ್ಚಿ ಹಾಕಿಸಿಕೊಂಡು ಬಾಗಿಲು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಇತ್ತೀಚೆಗೆ ನಗರದಲ್ಲಿ ನಡೆದ ಹರ್ಷ ಹತ್ಯಾ ಪ್ರಕರಣ, ಹಿಜಾಬ್ ವಿವಾದಗಳಿಂದ ನಗರದಲ್ಲಿ ಅಶಾಂತಿಯ ವಾತಾವರಣ ಉಂಟಾಗಿತ್ತು. ಹಿಂದೂ ಹುಲಿ ಎಂದು ಪದೇ ಪದೇ ಘರ್ಜಿಸುತ್ತಿದ್ದ ಕೆ.ಎಸ್. ಈಶ್ವರಪ್ಪನವರು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿದ್ದು, ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ರಾಜೀನಾಮೆ ನಂತರ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!