ಶಿವಮೊಗ್ಗ : ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ ಶುರುವಾಗಿದ್ದು,  ಸೋಂಕಿಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ.

ರಾಮಸ್ವಾಮಿ (55) ಮೃತ ದುರ್ದೈವಿ. ಏಪ್ರಿಲ್ 24ರಂದು ರಾಮಸ್ವಾಮಿ ಅವರಿಗೆ ಜ್ವರ ಬಂದಿತ್ತು. ಈ ಹಿನ್ನೆಲೆ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಮಸ್ವಾಮಿ ಅವರಿಗೆ  ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢವಾಗಿತ್ತು. ಜ್ವರ ಹೆಚ್ಚಾದ ಹಿನ್ನೆಲೆ ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾಮಸ್ವಾಮಿ ಅವರು ಮೃತರಾಗಿದ್ದಾರೆ.
ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಮಂಗನ ಕಾಯಿಲೆ ತೀವ್ರ ಸ್ವರೂಪದಲ್ಲಿ ಬಾಧಿಸಿತ್ತು. 2019 ಜನರು ಮಂಗನ ಕಾಯಿಲೆಗೆ ಬಲಿಯಾಗಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!