ಶಿವಮೊಗ್ಗ, ಮೇ.೦೭:
೨೦೨೧-೨೨ ನೇ ಸಾಲಿನಲ್ಲಿ ಗದಗ, ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ನೀರನ್ನು ಹರಿಸಲಾಗಿದೆ.
ಆದ್ದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಿ ಇತ್ಯಾದಿ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಗೆ ನೀಡಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್ಸೆಟ್ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.