ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾಗಳ ಸುಂದರಗೊಳಿಸುವ ಉದ್ದೇಶದಿಂದ ‘ಸುಣ್ಣ ಬಣ್ಣ ಅಭಿಯಾನ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಇದರ ಅಂಗವಾಗಿ ಇಂದು ಶಿವಮೊಗ್ಗ ತಾಲ್ಲೂಕಿನ ಹರಮಘಟ್ಟ ಗ್ರಾಮ ಪಂಚಾಯಿತಿಯ ಶಾಲೆಯಲ್ಲಿ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಅವರು ಚಾಲನೆ ನೀಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಿಗೆ ಈ ಅಭಿಯಾನದಡಿ ಸುಂದರಗೊಳಿಸುವ ಗುರಿ ಹೊಂದಲಾಗಿದೆ. ಈ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉತ್ತಮ ಸಹಕಾರ ನೀಡಿರುತ್ತಾರೆ.
ನಿಮ್ಮೆಲ್ಲರ ಈ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಶಾಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಅಭಿವೃದ್ಧಿ, ಸಹಾಯಕ ಕಾರ್ಯದರ್ಶಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಚುನಾಯಿತ ಪ್ರತಿನಿಧಿಗಳು, ಶಾಲಾ ಶಿಕ್ಷಕರು, ಗ್ರಾಮಸ್ಥರು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.