ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ಬೆಳಕಿಗೆ ಬಂದನ ನಂತ್ರ, ಇದೀಗ ಮೇ.21, 22ರಂದು 15,000 ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಶಿಕ್ಷಣ ಇಲಾಖೆ ಪುಲ್ ಅಲರ್ಟ್ ಆಗಿದೆ.

ಇದೇ ಕಾರಣದಿಂದ ಕೆಲ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ತರೋದಕ್ಕೆ ನಿರ್ಬಂಧ ವಿಧಿಸಿದೆ.

ಈ ಸಂಬಂಧ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೇತೃತ್ವದ ಸಭೆ ನಡೆಸಿದರು. ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತಂತೆ ಚರ್ಚಿಸಿದರು. ಅಧಿಕಾರಿಗಳು, ಪೊಲೀಸ್ ಇಲಾಖೆ ನೀಡಿದಂತ ಸಲಹೆಗಳ ಕುರಿತಂತೆಯೂ ಚರ್ಚೆ ನಡೆಸಲಾಯಿತು.

ಸಭೆಯ ಬಳಿಕ ಮಾತನಾಡಿದಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳೋ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಕೇಂದ್ರಗಳಿಗೆ ವಾಚ್ ಕಟ್ಟಿ ಅಭ್ಯರ್ಥಿಗಳು ಬರುವಂತಿಲ್ಲ. ಆಧುನಿಕ ತಂತ್ರಜ್ಞಾನದ ಯಾವುದೇ ಉಪಕರಣಗಳನ್ನು ತರೋದಕ್ಕೂ ಅವಕಾಶವಿಲ್ಲ ಎಂದರು.

ಪೊಲೀಸ್ ಇಲಾಖೆಯಿಂದ ನೀಡಿರುವಂತ ಸಲಹೆಗಳನ್ನು ಪಾಲಿಸಲಾಗುತ್ತಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತಂತ್ರಜ್ಞಾನ, ಮತ್ತಿತರ ಪರಿಕರಣಗಳನ್ನು ಪರೀಕ್ಷಾ ಕೊಠಡಿಗಳ ಒಳಗೆ ಕೊಂಡೊಯ್ಯೋದನ್ನು ನಿಷೇಧಿಸಲಾಗಿದೆ ಎಂಬುದಾಗಿ ಹೇಳಿದರು.

By admin

ನಿಮ್ಮದೊಂದು ಉತ್ತರ

error: Content is protected !!