ಶಿವಮೊಗ್ಗ : 2022-23 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶ ಸೀಟುಗಳನ್ನು ಪ್ರಾಂಶುಪಾಲರ ಹಂತದಲ್ಲಿಯೇ(ಸ್ಪಾಟ್ ಅಡ್ಮಿಷನ್)ಭರ್ತಿ ಮಾಡಲು ಮೇ 12 ರಿಂದ ಜೂನ್ 11 ರವರೆಗೆ ನೇರವಾಗಿ ಪ್ರವೇಶ ನೀಡಲಾಗುವುದು.

ಕೋರ್ಸುಗಳ ವಿವರ : ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್-63 ಸೀಟುಗಳು. ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-63 ಸೀಟುಗಳು. ಕಮರ್ಷಿಯಲ್ಟ್ರಾ ಕ್ವೀಸ್(ಕನ್ನಡ)-32 ಸೀಟುಗಳು. ಕಮರ್ಷಿಯಲ್ಟ್ರಾ ಕ್ವೀಸ್(ಆಂಗ್ಲ)-32 ಸೀಟುಗಳು. ಆಪರಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ-63 ಸೀಟುಗಳು.

ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪ್ರವೇಶ ವೇಳೆ ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 04 ಭಾವಚಿತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರವಿನಾಯ್ಕ.ಡಿ, ಪ್ರಾಂಶುಪಾಲರು, ಮೊ.ಸಂ: 9886610245, ರುದ್ರೇಶ್.ಡಿ.ಎನ್ ಪ್ರವೇಶ ಸಂಪರ್ಕಾಧಿಕಾರಿಗಳು ಮೊ.ಸಂ: 9686396494, 7975155925, 08182-295365 ನ್ನು ಸಂಪರ್ಕಿಸಬಹುದೆಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!