ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ. ಉಚಿತ ವಿದ್ಯುತ್ ಪ್ರಮಾಣವನ್ನು 40 ಯೂನಿಟ್‌ನಿಂದ 75 ಯೂನಿಟ್‌ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನುರಾಜ್ಯ ಸರಕಾರ ತೆಗೆದುಕೊಂಡಿದೆ.

ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ.

ಇದಕ್ಕೆ ಸಂಬಂಧಪಟ್ಟ ಕಡತ ಈಗಾಗಲೇ ಹಣಕಾಸು ಇಲಾಖೆಗೆ ರವಾನೆಯಾಗಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಎಲ್ಲ ಪ್ರಕ್ರಿಯೆಗಳನ್ನು ಇಂಧನ ಇಲಾಖೆ ಪೂರ್ಣಗೊಳಿಸಿದ್ದು, ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ ನಿರಂತರವಾಗಲಿದೆ

ಗ್ರಾಮೀಣ ಪ್ರದೇಶದ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡುತ್ತಿದ್ದ. 40 ಯೂನಿಟ್ ವಿದ್ಯುತ್ ಅನ್ನು75 ಯೂನಿಟ್ ಹೆಚ್ಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!