ಶಿವಮೊಗ್ಗ,ಆ.18: ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ(104) ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ

ಹಿರಿಯ ಸ್ವಾತಂತ್ರ್ಯ ಹೋರಾಟಗಾರಾದ ಹುಚ್ಚರಾಯಪ್ಪ ಬ್ರಿಟಿಷರ ವಿರುದ್ಧ 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲುವಾಸವನ್ನು ಅನುಭವಿಸಿದ್ದರು. ಈಸೂರು ಗ್ರಾಮವು ಸ್ವಾತಂತ್ರ್ಯ ಹೋರಾಟ ಭಾರತದ ಇತಿಹಾಸದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದೆ. ಭಾರತದಲ್ಲಿ ಮೊದಲ ಸ್ವಾತಂತ್ರ್ಯ ಪಡೆದ ಗ್ರಾಮ ಇದಾಗಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಹುಚ್ಚರಾಯಪ್ಪ ಅನೇಕ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈಸೂರು ಗ್ರಾಮದ ಹೋರಾಟಗಾರರೆಲ್ಲರೂ ಮೃತರಾಗಿದ್ದು, ಇವರು ಕೊನೆಯವರಾಗಿದ್ದರು. ಇಂದು ಹುಚ್ಚರಾಯಪ್ಪ ಅವರೂ ಮೃತರಾಗಿದ್ದು, ಈಸೂರು ಗ್ರಾಮದ ಹೋರಾಟಗಾರರ ಕೊನೆಯ ಕೊಂಡಿ ಕಳಚಿಕೊಂಡಿದೆ. ಹುಚ್ಚರಾಯಪ್ಪ ಅವರಿಗೆ ಅನೇಕ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ನೀಡಿ ಸರ್ಕಾರ ಗೌರವಿಸಿದೆ. ಹುಚ್ಚರಾಯಪ್ಪನವರಿಗೆ ನಾಲ್ಕು ಜನ ಮಕ್ಕಳು ಇದ್ದಾರೆ ಇಡಿ ಈಸೂರು ಗ್ರಾಮ ಇವರ ಸಾವಿನಿಂದ ಮೌನಕ್ಕೆ ಶರಣಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!