ಶಂಕರಘಟ್ಟ, ಜೂ.01:
ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರದಂದು ಸಸಿಗಳನ್ನು ನೆಡುವ ಮೂಲಕ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕ್ಯಾಂಪಸ್ ಸುತ್ತಮುತ್ತ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಗುಲಾಬಿ ಹೂವುಗಳನ್ನು ನೀಡುವ ಮೂಲಕ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಜಾಗೃತಿ ಮೂಡಿಸಲಾಯಿತು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್‌ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಟ, ಡಾ. ಕೆ. ಆರ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುವೆಂಪು ವಿವಿ: ಅಧ್ಯಾಪಕೇತರ ಸಿಬ್ಬಂದಿಗೆ ಬೀಳ್ಕೊಡುಗೆ
ಶಂಕರಘಟ್ಟ, ಜೂ.1: ಕುವೆಂಪು ವಿಶ್ವವಿದ್ಯಾಲಯದಲ್ಲಿ 30 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಹಾಯಕ ಕುಲಸಚಿವ ಜಿ.ರಾಮಣ್ಣ, ಪ್ರಥಮ ದರ್ಜೆ ಸಹಾಯಕ ರಾಜಗೋಪಾಲ ಶಾಸ್ತ್ರಿ, ಅಟೆಂಡರ್ ರಾಜಪ್ಪ, ವಿದ್ಯಾರ್ಥಿ ನಿಲಯದ ಸರ್ವರ್ ಶ್ರೀನಿವಾಸ್ ಅವರುಗಳಿಗೆ ವಿವಿಯ ಅಧ್ಯಾಪಕೇತರ ಸಂಘದ ವತಿಯಿಂದ ಮಂಗಳವಾರ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ.ಜಿ, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ ಅಧ್ಯಾಪಕೇತರ ನೌಕಕರ ಸಂಘದ ಉಪಾಧ್ಯಕ್ಷ ಮಹೇಶ್.ಪಿ, ಚಂದ್ರಶೇಖರ್, ಅಬ್ದುಲ್ ಆಲಿ, ನಿವೃತ್ತ ನೌಕರರುಗಳ ಕುಟುಂಬ ವರ್ಗ ಮತ್ತು ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಹಾಜರಿದ್ದರು.