ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ (ಬಿಪಿಎಲ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ/ಕುಟೀರಜ್ಯೋತಿ ಬಳಕೆದಾರರನ್ನೊಳಗೊಂಡು)

ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲು ಉದ್ದೇಶಿಸಿದ್ದು, ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ಬರುವ ಅರ್ಹ ಗ್ರಾಹಕ ಫಲಾನುಭವಿಗಳು ಅವಶ್ಯಕ ದಾಖಲೆಗಳನ್ನು ಸ್ವಯಂ ದೃಢೀಕೃತ ಅರ್ಜಿಯೊಂದಿಗೆ ಸಲ್ಲಿಸುವಂತೆ ಮೆಸ್ಕಾಂ ನಉವಿ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಚೇರಿ, ನ.ಉ.ವಿ-೧, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ, ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: 9448289448/9480841324 ಗಳನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!