ಶಿವಮೊಗ್ಗ, ಜೂ.14:
ಕಳೆದ ಮಾರ್ಚ್ 29ರಂದು ಕಳ್ಳರು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ರೂ 20,000 ರಿಂದ 30,000 ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ವಿಚಾರದಲ್ಲಿ ಆರೋಪಿಗಳ ಪತ್ತೆಗೆ ಮುಂದಾಗಿದ್ದ ಭದ್ರಾವತಿ ಗ್ರಾಮಾಂತರ ಪೊಲೀಸರು ಹಲವು ಕಳುವು ಪ್ರಕರಣದ ಇಬ್ಬರನ್ನು ಬಂಧಿಸಿದ್ದಾರೆ.


ಪಿಐ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವು ನಿನ್ನೆ ಸದರಿ ಪ್ರಕರಣದ ಆರೋಪಿ ಗಳಾದ ವಸಂತರಾಜು @ವಸಂತ, 37 ವರ್ಷ ಹೊಸಮನೆ ಭದ್ರಾವತಿ ಮತ್ತು ಶ್ವೇತಾ @ ಆಸ್ಮಾ, 32 ವರ್ಷ, ಬೇಡರ ಹೊಸಳ್ಳಿ ಶಿವಮೊಗ್ಗ ಅವರುಗಳನ್ನು ದಸ್ತಗಿರಿ ಮಾಡಿ ಆರೋಪಿತರಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ 01 ದೇವಸ್ಥಾನ ಕಳ್ಳತನ ಪ್ರಕರಣ, ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ 2 ಹಗಲು ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 10,25,000/- ರೂ ಗಳ ಒಟ್ಟು 220 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 132 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು ರೂ 5000/- ನಗದು ಹಣವನ್ನು ಅಮಾನತ್ತುಪಡಿಸಿ ಕೊಂಡಿರುತ್ತಾರೆ.

By admin

ನಿಮ್ಮದೊಂದು ಉತ್ತರ

error: Content is protected !!