ಸಾಗರ,
ಯೋಗದಿಂದ ಆರೋಗ್ಯ ಕಾಪಾ ಡಿಕೊಳ್ಳಲು ಸಾಧ್ಯ. ವಿಶ್ವಯೋಗ ದಿನದ ಸಂದರ್ಭದಲ್ಲಿ ಸಾಗರದ ಮೂವರು ಮಕ್ಕಳು ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುವ ಹೆಮ್ಮೆಯ ಸಂಗತಿ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಾಳಿ ತಿಳಿಸಿದರು.


ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುವ ವನಶ್ರೀ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡುತ್ತಿದ್ದರು.
ವನಶ್ರೀ ಶಾಲೆಯ ಮೂರು ಮಕ್ಕಳು ರಾಜ್ಯವನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವುದು ನಮ್ಮೂರಿನ ಹೆಮ್ಮೆ. ಜೂ. ೨೧ರಂದು ಯೋಗ ದಿನಾಚರಣೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ಯೋಗಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ನಮ್ಮೂರಿನ ಮೂವರು ಮಕ್ಕಳು ಯೋಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಇತರ ಮಕ್ಕಳಿಗೆ ಪ್ರೇರಣೆಯಾಗಿದ್ದಾರೆ. ಪ್ರಸ್ತುತ ಯೋಗ ಬದುಕಿಗೆ ಅತ್ಯಾಗತ್ಯ ವಾಗಿದೆ. ಮೂವರು ಮಕ್ಕಳು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು.


ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಮಾತನಾಡಿ, ದೆಹಲಿ ಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ನಮ್ಮೂರಿನ ಮಕ್ಕಳು ಪಾಲ್ಗೊಳ್ಳುತ್ತಿ ದ್ದಾರೆ ಎನ್ನುವುದೆ ಹೆಮ್ಮೆಯ ಸಂಗತಿ. ಚಿಕ್ಕ ವಯಸ್ಸಿನಲ್ಲಿಯೆ ಯೋಗವನ್ನು ಕರಗತ ಮಾಡಿಕೊಂಡು ಅದರಲ್ಲಿ ಸಾಧನೆ ಮಾಡಿದ ಮೂರು ಮಕ್ಕಳು ಎಲ್ಲರಿಗೂ ಸ್ಪೂರ್ತಿ. ವಿದ್ಯಾಭ್ಯಾಸದ ಜೊತೆಗೆ ಮಕ್ಕಳು ಯೋಗದಲ್ಲಿ ಸಹ ಪಾಲ್ಗೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದರು.
ವನಶ್ರೀ ಸಂಸ್ಥಾಪಕ ಎಚ್.ಪಿ. ಮಂಜಪ್ಪ ಮಾತನಾಡಿದರು.


ಯೋಗ ಸ್ಪರ್ಧೆಗೆ ಆಯ್ಕೆಯಾ ಸಗಿರುವ ಏಳನೇ ತರಗತಿಯ ಮೋತಿರಾಮ್, ಆರನೇ ತರಗತಿ ವಿದ್ಯಾರ್ಥಿಗಳಾದ ಶುಶ್ರೂತ ಮತ್ತು ನಂದಿನಿ ಅವರನ್ನು ಸನ್ಮಾನಿಸಲಾ ಯಿತು. ಕಾರ್ಯಕ್ರಮದಲ್ಲಿ ತಹಶೀ ಲ್ದಾರ್ ಮಲ್ಲೇಶ್ ಬಿ. ಪೂಜಾರ್, ಪೌರಾಯುಕ್ತ ರಾಜು ಡಿ. ಬಣಕಾರ್, ಗ್ರೇಡ್-೨ ತಹಶೀಲ್ದಾರ್ ಪರಮೇಶ್ವರ್ ಹಾಜರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!