ಶಿವಮೊಗ್ಗ,
ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಕಾರ್ಯಕರ್ತರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ದೇಶದಲ್ಲಿ ಇಸ್ಲಾಮಿಕ್ ಜಿಹಾದಿ ಮತ್ತು ಧರ್ಮಾಂದತೆ, ಹಿಂಸಾಚಾರ ಹೆಚ್ಚುತ್ತಿದೆ. ಕೆಲ ತಿಂಗಳುಗಳಿಂದ ದೇಶಾದ್ಯಂತ ಜಿಹಾದಿ ಮತಾಂಧತೆ ಹೆಚ್ಚುತ್ತಿದ್ದು, ಹಿಂದೂಗಳ ಮೇಲೆ ವ್ಯವಸ್ಥಿತವಾದ ದಾಳಿ ನಡೆಸಲಾಗುತ್ತಿದೆ. ರಾಮನವಮಿಯಂದು ದೇಶಾದ್ಯಂತ ಮೆರವ ಣಿಗೆ ಮತ್ತು ಕಲ್ಲು ತೂರಾಟಗಳನ್ನು ವ್ಯವಸ್ಥಿತ ವಾಗಿ ನಡೆಸಲಾಯಿತು. ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ತಿಳಿಸಿದರು.
ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಅವರನ್ನು ಬರ್ಭರವಾಗಿ ಹತ್ಯೆ ಮಾಡಲಾಗಿದೆ. ಹಲವೆಡೆ ದಾಳಿ ಕೂಡ ನಡೆದಿದೆ. ಇತ್ತೀಚೆಗೆ ಸಹೋದರಿ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಲ್ ಅವರ ಹೇಳಿಕೆಗಳ ಮೇಲೆ ಕಳೆದ ಎರಡು ಶುಕ್ರವಾರ ದಂದು ಪ್ರಾರ್ಥನೆಯ ನಂತರ ಮಸೀದಿಗಳಿಂದ ಹೊರಬಂದ ಗಲಭೆಕೋರರು ಹಿಂದೂಗಳ ಮನೆಗಳ ಮೇಲೆ, ಅಂಗಡಿಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ದೇವಸ್ಥಾನಗಳಿಗೆ ಹಾನಿ ಮಾಡಿದ್ದಾರೆ ಎಂದು ದೂರಿದರು.
ವಿಶ್ವ ಹಿಂದೂ ಪರಿಷದ್‌ನ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್, ಕಾರ್ಯದರ್ಶಿ ನಾರಾಯಣ್ ಜಿ. ವರ್ಣೇಕರ್, ನಗರಾಧ್ಯಕ್ಷ ಸತೀಶ್ ಮುಂಚೆಮನೆ, ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಮತ್ತಿತರರಿದ್ದರು.