ಶಿವಮೊಗ್ಗ,
ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು.
ಜಿಲ್ಲಾ ಮಟ್ಟದ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ, ಸಮಿತಿ ಸದಸ್ಯರಾದ ಜಗದೀಶ್ ಮಾತನಾಡಿ, ಶಿವಮೊಗ್ಗ ಸುತ್ತಮುತ್ತ ಗ್ರಾಮಗಳು ಉದಾಹರಣೆಗೆ ಹಸೂಡಿಯಂತಹ ಗ್ರಾಮಗಳು ನಗರಕ್ಕೆ ಹತ್ತಿರವಿದ್ದರೂ ಜನರು ಸೌಲಭ್ಯ ವಂಚಿತರಾಗಿದ್ದಾರೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸಿ, ಎಸ್ಟಿ, ತಮಿಳು ಇತರೆ ಹಿಂದುಳಿದ ಜನಾಂಗದವರಿದ್ದು ನಿರ್ಗತಿಕರಾಗಿ ದ್ದಾರೆ. ಇಂತಹ ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಬೇಕೆಂದು ಕೋರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಈ ಹಳ್ಳಿಗಳಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿ ನೀಡಿ, ದಿನಾಂಕ ನಿಗದಿಪಡಿಸಿ ಅರ್ಧ ದಿನ ಬಂದು ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾ ಗುವುದು ಎಂದು ಭರವಸೆ ನೀಡಿದರು.
ಸರ್ಕಾರದ ಮರಳು ಕ್ವಾರೆಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆಸುವುದನ್ನು ತಡೆಯುವಂತೆ ಸದಸ್ಯ ಜಗದೀಶ್ ಕೋರಿದರು. ಜಿಲ್ಲಾಧಿಕಾರಿಗಳು ಭೂವಿಜ್ಞಾನಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಪ್ರತಿ ತಿಂಗಳು ಮರಳು ಬಳಕೆ ಮಾಡಿದ ಇಲಾಖೆ ಗಳಿಂದ ವರದಿ ಪಡೆದು ನೀಡುವಂತೆ ಹಾಗು ಸಿಸಿ ಟಿವಿ ಫೂಟೆಜ್ ನೀಡುವಂತೆ ಸೂಚಿಸಿ ದರು. ಒಂದು ವೇಳೆ ನೀಡದಿದ್ದರೆ ಅವರ ವಿರುದ್ದ ನೋಟಿಸ್ ನೀಡಲಾಗುವುದು ಎಂದರು.
ಸಂತೇ ಕಡೂರು, ಸೋಗಾನೆ, ಮತ್ತೂರು ಪ್ರದೇಶದಲ್ಲಿ ಬಲಿಷ್ಟ ವ್ಯಕ್ತಿಗಳು ಸರ್ಕಾರಿ ಭೂಮಿ ಖರೀದಿಸಿ,
ಮಾರಾಟ ಮಾಡುವ ಮಾಫಿಯಾ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು, ಮೊರಾರ್ಜಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟವಿಲ್ಲವಾಗಿದ್ದು, ಉತ್ತಮ ಶಿಕ್ಷಕರನ್ನು ನೇಮಿಸಬೇಕು, ಶಾಸಗಿ ಶಾಲೆಗಳಲ್ಲಿ ಫೀ ಹಾವಳಿ ತಪ್ಪಿಸುವಂತೆ ಮತ್ತು ಕೆಲವು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿ ವೇತನ ಸೌಲಭ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುತ್ತಿಲ್ಲ ಈ ಬಗ್ಗೆ ಕ್ರಮ ವಹಿಸುವಂತೆ ಹಾಗೂ ಅಬ್ಬಲಗೆರೆ ಗ್ರಾಮದ ಒಂದು ಎಕರೆ ಸರ್ಕಾರಿ ಜಾಗದಲ್ಲಿ ಲೇಔಟ್ ನಿರ್ಮಾಣವಾಗು ತ್ತಿದ್ದು ಇದನ್ನು ತೆರವುಗೊಳಿಸುವಂತೆ ಕೋರಿದರು.
ಜಿಲ್ಲಾಧಿಕಾರಿಗಳು, ಅಕ್ರಮ ಮದ್ಯ ಮಾರುವವರ ವಿರುದ್ದ ಪ್ರಕರಣ ದಾಖಲಿಸು ವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಸ್ಮಶಾನ ಭೂಮಿ ಮಂಜೂರಾತಿ, ಕೋವಿಡ್ ಪರಿಹಾರ, ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿ, ಪರಿಹಾರ ಸೇರಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ಬಿ.ಎಂ, ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್.ವೈಶಾಲಿ, ಸಾಗರ ಉಪವಿಭಾಗದ ತಹಶೀಲ್ದಾರ್ ನಾಗರಾಜ್, ಶಿವಮೊಗ್ಗ ತಹಶೀಲ್ದಾರ್ ಡಾ.ನಾಗರಾಜ್ ಇತರರಿದ್ದರು.